ಬೆಳ್ತಂಗಡಿ ತಾಲೂಕಿನ ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ಮಾ. 2ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಹುಡುಕುತ್ತಿದ್ದ ಪೂಜಾರನ್ನು ಪತಿ ಪ್ರಕಾಶ್ ಅವರು ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿದ್ದರು. ಪ್ರಕಾಶ್ ಬದ್ಯಾರು ಬರಾಯದ ತಮ್ಮ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದರು.