Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ: ಗರ್ಭಿಣಿ ಪತ್ನಿಯನ್ನು ಕೈಬಿಟ್ಟ ಪತಿ ವಿರುದ್ಧ ಆರೋಪ
    ಕ್ರೈಂ ಸ್ಟೋರಿ

    ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ: ಗರ್ಭಿಣಿ ಪತ್ನಿಯನ್ನು ಕೈಬಿಟ್ಟ ಪತಿ ವಿರುದ್ಧ ಆರೋಪ

    May 6, 2026
    Share

    ತುಮಕೂರು: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ.

    ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋದಾಗ ಶುರುವಾದ ಸ್ನೇಹ ಬಳಿಕ ಪ್ರೀತಿಯಾಗಿ ಬದಲಾಗಿತ್ತು. ಪೋಷಕರ ವಿರೋಧದ ನಡುವೆಯೂ ಈ ಜೋಡಿ ಪಾವಗಡದ ದೇವಸ್ಥಾನದಲ್ಲಿ ಮದುವೆಯಾಗಿತ್ತು.

    ಮದುವೆಯಾಗಿ ಒಂದೂವರೆ ವರ್ಷ ಸುಖ ಸಂಸಾರ ನಡೆಸಿದ ಬಳಿಕ, ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ಗರ್ಭಿಣಿ ಪತ್ನಿಯನ್ನು ದೂರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಬೊಮ್ಮಾನಾಯಕ್ ಕುಟುಂಬದವರು ಆತನಿಗೆ ಮತ್ತೊಂದು ಮದುವೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದಾಗ ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.

    ಆರು ತಿಂಗಳ ಗರ್ಭಿಣಿಯಾಗಿರುವ ಯುವತಿಯು ತನ್ನ ಹಾಗೂ ಮಗುವಿನ ಭವಿಷ್ಯಕ್ಕಾಗಿ “ನನಗೆ ನನ್ನ ಗಂಡ ಬೇಕು” ಎಂದು ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ. ಸದ್ಯ ಗಂಡ ಬೊಮ್ಮಾನಾಯಕ್, ಆತನ ತಾಯಿ ಕರಿಯಮ್ಮ ಸೇರಿದಂತೆ ನಾಲ್ವರ ವಿರುದ್ಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 339

    karnataka PoliceInvestigation

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.