ಧಾರವಾಡ : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, : ಕೋವಿಡ್ ರೂಪಾಂತರಿ ಬಿ.ಎಫ್.7 ಸೋಂಕು ಬಂದರೂ ಅದನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಂಡಿದೆ.
ಕೋವಿಡ್‍ದೊಂದಿಗೆ ಜೀವನ ಸಾಗಿಸುವ ಅನಿವಾರ್ಯತೆ ಇದೆ. ಅದು ಜೀವನದ ಒಂದು ಭಾಗವಾಗುತ್ತಿದ್ದು, ಮುಂಜಾಗೃತಾ ಕ್ರಮಗಳೊಂದಿಗೆ ಬದುಕಬೇಕಿದೆ ಎಂದು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಗಳನ್ನು ನಿರ್ಭಂಧಿಸಲಾಗಿತ್ತು. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಆರ್ಥಿಕ, ವಾಣಿಜ್ಯ, ಚುಟವಟಿಕೆಗಳು ಪುನರಾರಂಭಗೊಂಡು, ಚೈತನ್ಯ ಪಡೆದಿವೆ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಆರ್ಥಿಕ, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಅಥವಾ ತಡೆಯುವ ಯೋಚನೆ ಸರ್ಕಾರದ ಮುಂದೆ ಇಲ್ಲಾ ಎಂದು ತೀಳಿಸಿದ್ದಾರೆ.
ಎಲ್ಲರೂ ಕಡ್ಡಾಯವಾಗಿ ಮೂರು ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಒಳಾಂಗಣದಲ್ಲಿರುವ ಆಸನಗಳಿಗೆ ಮಾತ್ರ ಅವಕಾಶ ನೀಡಿ, ಸುರಕ್ಷಿತ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಶಾಲಾ, ಕಾಲೇಜು, ಬಸ್, ರೈಲು, ಸಂತೆ, ಜಾತ್ರೆ ಇತ್ಯಾದಿಗಳಲ್ಲಿ ತಪ್ಪದೇ ಮಾಸ್ಕ್ ಧರಿಸುವುದನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಚಿಸಲಾಗಿದೆ ಎಂದರು.