ಮಂಗಳೂರು: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ದೇಶಭಕ್ತಿಯ ಸ್ಲೋಗನ್ಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಘಟನೆಯ ಬಗ್ಗೆ ವಿವರಣೆ ನೀಡಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಾಂತಿಭಂಗದ ಆತಂಕವಿರುವ ಸಂದರ್ಭಗಳಲ್ಲಿ ಷರತ್ತುಬದ್ಧ ಅನುಮತಿ ನೀಡಲಾಗುತ್ತದೆ. ಆದರೆ ಈ ಘಟನೆಯಲ್ಲಿ ಪ್ರತಿಭಟನಾಕಾರರು ಯಾವುದೇ ಮುಂಚಿತ ಅನುಮತಿ ಪಡೆದಿರಲಿಲ್ಲ ಅಥವಾ ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಕಮಿಷನರ್ ಹೇಳಿದ್ದಾರೆ.
ಮಂಗಳೂರು: ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ವಿಚಾರವಾಗಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಕಾರ್ಯಾಚರಣೆಯ ಬಗ್ಗೆ ಹರಿದಾಡುತ್ತಿರುವ ಅಪಪ್ರಚಾರಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದು, ಕಾನೂನು ಉಲ್ಲಂಘಿಸಿ ದೇಶಭಕ್ತಿಯ ಘೋಷಣೆಗಳನ್ನು ಕವಚವಾಗಿ ಬಳಸಿಕೊಳ್ಳುವವರ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದಾರೆ.
ದೇಶದ ರಕ್ಷಣೆ ಮತ್ತು ಸಂವಿಧಾನದ ಉದ್ಧಾರಕ್ಕಾಗಿ ಬದ್ಧರಾಗಿರುವ ತಾವು ಕಾನೂನು ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದಿರುವ ಕಮಿಷನರ್, ಸಾರ್ವಜನಿಕ ಶಾಂತಿಗೆ ಭಂಗ ತರುವವರು “ಭಾರತ ಮಾತಾ ಕೀ ಜೈ” ಎಂಬ ಘೋಷಣೆ ಕೂಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ದೇಶಭಕ್ತಿಯ ಸ್ಲೋಗನ್ಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ವಿವರಣೆ ನೀಡಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಾಂತಿಭಂಗದ ಆತಂಕವಿರುವ ಸಂದರ್ಭಗಳಲ್ಲಿ ಷರತ್ತುಬದ್ಧ ಅನುಮತಿ ನೀಡಲಾಗುತ್ತದೆ. ಆದರೆ ಈ ಘಟನೆಯಲ್ಲಿ ಪ್ರತಿಭಟನಾಕಾರರು ಯಾವುದೇ ಮುಂಚಿತ ಅನುಮತಿ ಪಡೆದಿರಲಿಲ್ಲ ಅಥವಾ ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಬದಲಿಗೆ ಅವರ ಪ್ರತಿಭಟನೆಗೆ ಅವಕಾಶ ಕಲ್ಪಿಸಿ ಅನುಕೂಲ ಮಾಡಿಕೊಡಲಾಗಿತ್ತು ಎಂದು ತಿಳಿಸಿದ್ದಾರೆ.
ಹೊರಗಿನಿಂದ ಬಂದು ಕಾಲೇಜಿಗೆ ನುಗ್ಗಲು ಯತ್ನಿಸಿದವರನ್ನು ತಡೆಯಲಾಗಿದ್ದು, ಕಾಲೇಜು ಆಡಳಿತ ಮಂಡಳಿಯಿಂದ ದೂರು ಬಂದರೆ ಅದು ಅತಿಕ್ರಮಣವಾಗಲಿದೆ ಎಂದು ತಿಳಿಸಲಾಗಿದೆ. ಮೊದಲ ಬಾರಿ ಅವರನ್ನು ವಶಕ್ಕೆ ಪಡೆದಾಗ ಮುಚ್ಚಳಿಕೆ ಬರೆಸಿಕೊಳ್ಳಲು ಉದ್ದೇಶಿಸಲಾಗಿದ್ದರೂ, ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿ ಉದಾರವಾಗಿ ಬಿಡುಗಡೆ ಮಾಡಲಾಗಿತ್ತು. ಆದರೆ, ಕಾಲೇಜು ಆಡಳಿತ ಮಂಡಳಿಯು ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದರೂ, ಮಧ್ಯಾಹ್ನ ಮತ್ತೊಮ್ಮೆ ಬಂದು ವಿದ್ಯಾರ್ಥಿಗಳನ್ನು ಪ್ರಚೋದಿಸಲು ಯತ್ನಿಸಿದ ಕಾರಣ ಅವರನ್ನು ಪುನಃ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಪೊಲೀಸರು ಕೇವಲ ಒಮ್ಮೆ ಮಾತ್ರ ವಶಕ್ಕೆ ಪಡೆದಿದ್ದಾರೆ ಎಂಬ ತಪ್ಪು ಕಲ್ಪನೆಯನ್ನು ಸರಿಪಡಿಸಲು ಈ ಸ್ಪಷ್ಟನೆ ನೀಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.




