Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಅರೆಸ್ಟ್
    ಇತ್ತೀಚಿನ ಸುದ್ದಿ

    13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಅರೆಸ್ಟ್

    February 2, 2025
    Share

    ಮಂಗಳೂರು: 13 ಗಂಭೀರ ಪ್ರಕರಣಗಳ ಆರೋಪಿಯನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

    ಬಂಧಿತನನ್ನು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಬಂಧಿತ ಆರೋಪಿ. ಬಂಧಿತ ಭರತ್ ಶೆಟ್ಟಿ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ 3ನೇ ಬ್ಲಾಕ್‌ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ನಾಲ್ಕು ಕೊಲೆ ಯತ್ನ, ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಆರೋಪಿ ಭರತ್ ಶೆಟ್ಟಿ ವಿರುದ್ಧದ ಕಾನೂನು ಕ್ರಮ ಇದ್ದರೂ, ಅದರ ನಡುವೆಯೇ ಈತ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರೆಸಿದ್ದಾನೆ. ಈ ಮೂಲಕ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತಿದ್ದ. ಆದ್ದರಿಂದ ಕಾಳಧನಿಕರು, ಮಾದಕ ವ್ಯಸನಿಗಳು, ಜೂಜುಕೋರರು, ಗೂಂಡಾಗಳು, ಅನೈತಿಕ ಸಂಚಾರ ಅಪರಾಧಿಗಳ ಅಪಾಯಕಾರಿ ಚಟುವಟಿಕೆಗಳನ್ನು ಕರ್ನಾಟಕ ತಡೆಗಟ್ಟುವಿಕೆ ಸೆಕ್ಷನ್ 3ರ ಅಡಿಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ, ಸ್ಲಂ ಗ್ರಾಬರ್ಸ್ ಮತ್ತು ವಿಡಿಯೋ ಅಥವಾ ಆಡಿಯೊ ಪೈರೇಟ್ಸ್ ಆಕ್ಟ್, 1985 (ಗೂಂಡಾ ಕಾಯ್ದೆ)ಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಭರತ್ ಶೆಟ್ಟಿ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ವಶಕ್ಕೆ ಪಡೆದ ಪೊಲೀಸರು ಗೂಂಡಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 222

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.