Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ; ರಾತ್ರೋರಾತ್ರಿ ನಾಲ್ವರು ಆರೋಪಿಗಳ ಬಂಧನ
    ರಾಜ್ಯ ಸುದ್ದಿ

    ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ; ರಾತ್ರೋರಾತ್ರಿ ನಾಲ್ವರು ಆರೋಪಿಗಳ ಬಂಧನ

    June 28, 2026
    Share

    ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೇಸ್ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

    ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕು ಎಂದು ಘೋಷಣೆ ಕೂಗಿ ಗಲಾಟೆ ಆರಂಭಿಸಿದರು. ಕಾರ್ಯಕ್ರಮಕ್ಕೆ ತೀವ್ರ ಅಡ್ಡಿಯಾದಾಗ ಸ್ಥಳದಲ್ಲಿದ್ದ ಸ್ವಾಮೀಜಿಯವರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ಕಾರ್ಯಕ್ರಮ ಮುಂದುವರಿಯಲು ಅನುವು ಮಾಡಿಕೊಟ್ಟರು.

    ಆದರೆ, ಕಾರ್ಯಕ್ರಮ ಮುಗಿದ ಬಳಿಕ ಗಲಾಟೆ ಮತ್ತಷ್ಟು ವಿಕೋಪಕ್ಕೆ ತಿರುಗಿತು. ಪ್ರದೀಪ್ ಈಶ್ವರ್ ಅವರು ತಮ್ಮ ಕಾರಿನ ಸನ್‌ರೂಫ್ (Sunroof) ಮೂಲಕ ಹೊರಬಂದು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ, ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರಿಗೆ ತಿರುಗೇಟು ನೀಡಲು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ. ಇದರಿಂದ ತೀವ್ರ ರೊಚ್ಚಿಗೆದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರ ಮೇಲೆ ನೇರವಾಗಿ ಚಪ್ಪಲಿ ಎಸೆದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲೇ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

    Post Views: 111

    karnataka PoliceInvestigation

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.