ಮುಲ್ಕಿ: ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದಂತಹ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ಸಂಚರಿಸುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಎಂಬ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಕಿನ್ನಿಗೋಳಿ ಬಳಿಯ ಭಟ್ಟಕೋಡಿಯಲ್ಲಿ ಒಂದು ಭೀಕರ ಅಪಘಾತ ಸಂಭವಿಸಿದೆ.ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆತ್ಮಾನಂದ (27) ನವೀನ್ ಹೂಗಾರ (26) ಮೃತ ಬೈಕ್ ಸವಾರರು ಎಂದು ತಿಳಿದುಬಂದಿದೆ. ಮೃತರು ಧಾರವಾಡ ಜಿಲ್ಲೆಯ ಕಲ್ಲೂರಿನ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.