ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಗುರುತಿಸಲಾಗಿದೆ.
ನೀಲೇಶ್ವರದಿಂದ ಕಾಞಂಗಾಡ್ ತಿರುವತ್ತ್ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಇಬ್ಬರೂ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣ ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.




