ಕಾಸರಗೋಡು: ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಡೆದಿದೆ.

ಮೃತಪಟ್ಟ ಸವಾರನನ್ನು ಕುಂಬಳೆ ಕಣ್ಣೂರಿನ ತ್ಯಾಂಪಣ್ಣ ಪೂಜಾರಿ ರವರ ಪುತ್ರ ರವಿಚಂದ್ರ (35) ಎಂದು ಗುರುತಿಸಲಾಗಿದೆ.
ರವಿಚಂದ್ರ ಅವರು ಮೆಡಿಕಲ್ ರೆಪ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರವಿಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂಬಳೆ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದ್ದಾರೆ. ರವಿಚಂದ್ರ ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ಜನಾರ್ಧನರವರ ಸಹೋದರರಾಗಿದ್ದಾರೆ.