Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಲಾರಿಯಡಿಗೆ ಬಿದ್ದು ಬೈಕ್ ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಲಾರಿಯಡಿಗೆ ಬಿದ್ದು ಬೈಕ್ ಸವಾರ ಮೃತ್ಯು

    May 15, 2024
    Share

    ಬಂಟ್ವಾಳ: ಲಾರಿಯಡಿಗೆ ಬಿದ್ದು ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ಮಂಗಳವಾರ ಸಂಜೆ ನಡೆದಿದೆ.

    ಉತ್ತರ ಪ್ರದೇಶ ಮೂಲದ ಪ್ರಸ್ತುತ ಪ್ರಸ್ತುತ ಉಡುಪಿ ನಿವಾಸಿ ಸೋನು (19) ಮೃತ ಯುವಕ.ಘಟನೆಯಲ್ಲಿ ಸಹಸವಾರ ಪ್ರಸಾದ್ ಪೂಜಾರಿ ಕಾರ್ಕಳ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋನು ಹಾಗೂ ಪ್ರಸಾದ್ ಅವರು ನೆಲ್ಯಾಡಿಯಲ್ಲಿರುವ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಜಂಕ್ಷನ್ ನಲ್ಲಿ ಹೆದ್ದಾರಿಯಲ್ಲಿ ಅಡ್ಡಲಾಗಿ ಇರಿಸಲಾದ ಬ್ಯಾರಿಕೇಡ್ ನ್ನು ಗಮನಿಸದ ಬೈಕ್ ಸವಾರ ಕಂಟೇನರ್ ಲಾರಿಯೊಂದನ್ನು ಓವರ್ ಟೇಕ್ ಮಾಡುವ ರಭಸಕ್ಕೆ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಹಾಗೂ ಸಹಸವಾರ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಅದೇ ಕಂಟೇನರ್ ಲಾರಿಯ ಚಕ್ರದಡಿಗೆ ಸಿಲುಕಿಕೊಂಡಿದ್ದಾರೆ.ಇದರಲ್ಲಿ ಸೋನು ಸ್ಥಳದಲ್ಲಿಯೇ ಮೃತಪಟ್ಟರೆ, ಪ್ರಸಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ‌ನೀಡಿ‌ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

    Post Views: 168

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.