Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಪ್ರಕರಣ ದಾಖಲು!!
    ಇತ್ತೀಚಿನ ಸುದ್ದಿ

    ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಪ್ರಕರಣ ದಾಖಲು!!

    March 26, 2026
    Share

    ಕುಂದಾಪುರ :ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ ನಡೆದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಹಾಲಾಡಿ ಗ್ರಾಮದ 43 ವರ್ಷದ ಯಶೋಧ ಅವರು ನೀಡಿದ ದೂರಿನ ಪ್ರಕಾರ, ಅಂಕದಕಟ್ಟೆಯ ಚಂದ್ರಿಕಾ (38) ಮತ್ತು ಶಿವಮೊಗ್ಗದ ಭಾಸ್ಕರ (45) ಇವರಿಬ್ಬರು ಬಿಟ್‌ಕಾಯಿನ್ ಹೂಡಿಕೆ ಮೂಲಕ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಕೆ ಮೂಡಿಸಿದ್ದರು. ಬೈಂದೂರಿನ ಪ್ರದೀಪ್ ಶೆಟ್ಟಿ ಮೂಲಕ ಸಂಪರ್ಕ ಸಾಧಿಸಿ, ಕೋಟೇಶ್ವರ ಗ್ರಾಮದ ಅಂಕದಕಟ್ಟೆ ಸಹನಾ ಹಾಲ್ ಸಮೀಪ ಇರುವ ಕಚೇರಿಗೆ ಹಣ ತರಲು ಸೂಚಿಸಿದ್ದರು.

    ದೂರಿನ ಪ್ರಕಾರ, ಕಚೇರಿಗೆ ಹೋದ ಯಶೋಧ ಅವರಿಗೆ ವ್ಯವಹಾರ ಕಾನೂನುಬದ್ದವಾಗಿದೆ, ಲೈಸೆನ್ಸ್ ಹೊಂದಿದೆ ಎಂದು ಹೇಳಿ ನಕಲಿ ದಾಖಲೆಗಳನ್ನು ತೋರಿಸಿ ನಂಬಿಸಿದ್ದರು. 2024 ಡಿಸೆಂಬರ್ 11 ರಂದು ಮೊದಲಿಗೆ ₹3.80 ಲಕ್ಷ ಪಡೆದುಕೊಂಡಿದ್ದು, ನಂತರ ಹಂತ ಹಂತವಾಗಿ ಒಟ್ಟು ₹17 ಲಕ್ಷ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಆದರೆ, ಹೂಡಿಕೆಯ ದೃಢೀಕರಣಕ್ಕಾಗಿ ಬಾಂಡ್ ನೀಡದೇ ಸಮಯ ಕಳೆಯುತ್ತ ಬಂದಿದ್ದಾರೆ ಎನ್ನಲಾಗಿದೆ.

    2026 ಮಾರ್ಚ್ 16 ರಂದು ಸಂಜೆ 5 ಗಂಟೆಗೆ ಕಚೇರಿಗೆ ತೆರಳಿ ಹಣದ ಬಾಂಡ್ ಕೇಳಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ರೀತಿ ದೂರಿದಾರರ ಬಂಧುಗಳು ಮತ್ತು ಪರಿಚಿತರನ್ನೂ ನಂಬಿಸಿ ಹಣ ಪಡೆದಿರುವ ಆರೋಪವೂ ಕೇಳಿಬಂದಿದೆ.

    ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ

    Post Views: 97

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.