Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ
    ಇತ್ತೀಚಿನ ಸುದ್ದಿ

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026
    Share

    ಬಿಜೆಪಿ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ, ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ ಪ್ರಮುಖ ಜವಾಬ್ದಾರಿಗಳು ನೀಡಿರಲಿಲ್ಲ.

    ಇತ್ತೀಚೆಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡಿರುವ ನಾಯಕ ಅಣ್ಣಾಮಲೈ ನಿರ್ಧಾರ ಹಲವರಿಗೆ ಶಾಕ್ ಕೊಟ್ಟಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಣ್ಣಾಮಲೈಗೆ ಚುನಾವಣಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು.

    ಇದೀಗ ಅಣ್ಣಾಮಲೈ ತಮ್ಮ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳ ಚನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ಅಣ್ಣಾಮಲೈಗೆ ವಹಿಸಲಾಗಿತ್ತು. ಆದರೆ ಅಣ್ಣಾಮಲೈ ರಾಜೀನಾಮೆ ನೀಡಿ ಜವಾಬ್ದಾರಿಯಿಂದ ಹೊರಬಂದಿದ್ದಾರೆ. ಅಣ್ಣಾಮಲೈ ರಾಜೀನಾಮೆಗೆ ಕಾರಣವೇನು? ರಾಜೀನಾಮೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅಣ್ಣಾಮಲೈ ಮಹತ್ವದ ವಿಚಾರ ಬಹಿರಂಗಪಡಿಸಿದ್ದಾರೆ.

    2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಗೆ ಅನಾರೋಗ್ಯವಿದೆ. ಹೀಗಾಗಿ ನಾನು ಕೊಯಂಬತ್ತೂರಿನಲ್ಲೇ ಉಳಿದುಕೊಂಡಿದ್ದೇನೆ. ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಹೀಗಾಗಿ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ.

    ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ, ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಬಿಜೆಪಿ ಸ್ಪರ್ಧಿಸುತ್ತಿರುವ ಕ್ಷೇತ್ರಗಳಿಗೆ ಹಿರಿಯ ನಾಯಕರಿಗೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. 41 ವಿಧಾನಸಭಾ ಕ್ಷೇತ್ರಗಳಿದೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

    ಈ ಪೈಕಿ ಕೆ ಅಣ್ಣಾಮಲೈಗೆ ಸಿಂಗನಲ್ಲೂರು, ಮದುರೆ ದಕ್ಷಿಣ, ವಿರುಂಗಂಪಾಕಂ, ಕಾರೈಕುಡಿ, ಶ್ರೀವೈಕಂಠಮ್, ಪದ್ಮನಾಭಪುರಂ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ಅಣ್ಣಾಮಲೈಗೆ ನೀಡಲಾಗಿತ್ತು.

    Post Views: 184

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.