Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್‌: ಯಾರಿದು? ಇಲ್ಲಿದೆ ಮಾಹಿತಿ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್‌: ಯಾರಿದು? ಇಲ್ಲಿದೆ ಮಾಹಿತಿ

    March 14, 2024
    Share

    ಮಂಗಳೂರು: ಲೋಕಸಭೆ ಚುನಾವಣೆಗಾಗಿ ಇತ್ತೀಚೆಗಷ್ಟೇ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಇಂದು (ಮಾರ್ಚ್‌ 13) 2ನೇ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ನೀಡಲಾಗಿದೆ. ಹಾಗಾದರೆ ಈ ಹೊಸ ಅಭ್ಯರ್ಥಿ ಯಾರು, ಹಿನ್ನೆಲೆ ಏನು ಹಾಗೂ ಇವರಿಗೇ ಟಿಕೆಟ್‌ ನೀಡಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

    ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಈ ಪೈಕಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ಘೋಷಣೆ ಮಾಡಿದ್ದು, ಇವರು ಕೂಡ ಹೊಸಬರಾಗಿದ್ದಾರೆ.

    ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹಿನ್ನೆಲೆ: ಈ ಕ್ಷೇತ್ರದಿಂದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಮಿಸ್‌ ಆಗಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ನೇಮಿಸಿತ್ತು.

    ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹಿನ್ನೆಲೆ: ಈ ಕ್ಷೇತ್ರದಿಂದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಮಿಸ್‌ ಆಗಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಬಿಜೆಪಿ ಯುವ ನಾಯಕ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ನೇಮಿಸಿತ್ತು.

    ತಮ್ಮ ಕಾಲೇಜು ವರ್ಷಗಳಲ್ಲಿ ಎನ್‌ಸಿಸಿನಲ್ಲಿ ನಾಯಕತ್ವಕ್ಕಾಗಿ ಹೆಸರುವಾಸಿಯಾದ ಚೌಟಾ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮಂಗಳೂರಿನ ಮಿಲಾಗ್ರೆಸ್ ಶಾಲೆಯಲ್ಲಿ ಪಡೆದರು ಮತ್ತು ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಪಿಯು ಮತ್ತು ಬಿಎಸ್‌ಸಿಯನ್ನು ಪೂರ್ಣಗೊಳಿಸಿದರು.

    ತಮ್ಮ ಶಿಕ್ಷಣವನ್ನು ಮುಂದುವರೆಸುತ್ತಾ, ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM)ನಲ್ಲಿ ವ್ಯಾಸಂಗ ಮಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಸಿಸಿಯಲ್ಲಿ ಅತ್ಯುತ್ತಮ ಕೆಡೆಟ್ ಆಗಿ ಗುರುತಿಸಿಕೊಂಡಿದ್ದು, ನವದೆಹಲಿ ಗಣರಾಜ್ಯ ಪರೇಡ್‌ನಲ್ಲಿ ಭಾಗವಹಿಸಿ ಇಡೀ ದೇಶದ ಗಮನ ಸೆಳೆದಿದ್ದಾರೆ.

    ಪದವಿಯ ನಂತರ, ಕ್ಯಾಪ್ಟನ್ ಚೌಟಾ ಅವರು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಎಕ್ಸಾಮಿನೇಷನ್ (CDSE) ಅನ್ನು ಉತ್ತೀರ್ಣರಾದರು ಮತ್ತು ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (OTA) ತರಬೇತಿ ಪಡೆದರು. ಅವರು ಪ್ರತಿಷ್ಠಿತ 8 ಗೂರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಅಲ್ಲದೆ ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ವಿವಿಧ ಪ್ರದೇಶಗಳಿಗೆ ಉತ್ತಮ ಕೊಡುಗೆ ನೀಡಿದ್ದಾರೆ.

    ಬಳಿಕ ಸ್ವಯಂ ನಿವೃತ್ತಿಯ ನಂತರ 2011ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್ಎಸ್) ಮತ್ತು ಬಿಜೆಪಿಯೊಂದಿಗೆ ಸೇರಿಕೊಂಡರು. 2013ರಲ್ಲಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು 2016ರಿಂದ 2019 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದರು.

    ಕ್ಯಾಪ್ಟನ್ ಚೌಟಾ ಅವರು ಬರೀ ರಾಜಕೀಯ ಅಲ್ಲದೆ ಇದನ್ನು ಮೀರಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಯಮಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. 2015ರಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳದ ನಿಷೇಧದ ವಿರುದ್ಧದ ಪ್ರತಿಭಟನೆಯನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಅವರು, ಮಂಗಳೂರು ಕಂಬಳವನ್ನು ಸತತ ಆರು ವರ್ಷಗಳಿಂದ ಆಯೋಜಿಸಿದ್ದು, ಸ್ಥಳೀಯ ಸಂಪ್ರದಾಯಗಳಿಗೆ ಹೆಚ್ಚು ಒತ್ತು ನೀಡಿದ ಹೆಗ್ಗಳಿಗೆ ಇವರದ್ದಾಗಿದೆ.

    Post Views: 254

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.