Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ..!

    June 17, 2024
    Share

    ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು.

    ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ ಬಂತು. ಬಳಿಕ ಬಿಜೆಪಿ ಕಚೇರಿ ಮುಂಭಾಗದಿಂದ ಅರ್ಧ ಕಿ.ಮೀ. ದೂರದ ಪೆಟ್ರೋಲ್ ಬಂಕ್ ಗೆ ಸ್ಕೂಟರ್ ಗಳನ್ನು ತಳ್ಳಿಕೊಂಡು, ಕಾರನ್ನು ಹಗ್ಗ ಕಟ್ಟಿ ಎಳೆದುಕೊಂಡು ತರಲಾಯಿತು. ಅಲ್ಲಿ ಭಿಕ್ಷೆಯೆತ್ತಿ ಹಣ ಸಂಗ್ರಹಿಸಲಾಯಿತು‌. ಬಳಿಕ ಗೆರಟೆಯಲ್ಲಿ, ಚೊಂಬುವಿನಲ್ಲಿ ಪೆಟ್ರೋಲ್ ಹಾಕಿಸಿ ಕಾರು, ಸ್ಕೂಟರ್ ಗೆ ತುಂಬಿಸಲಾಯಿತು. ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

    Post Views: 240

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.