ಬೆಳ್ತಂಗಡಿ: ತಾಲೂಕಿನ ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರ್ಯ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ದಲಿತ ಸಮುದಾಯಕ್ಕೆ ಸೇರಿದ ಮಹಿಳೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಪಲ್ಲದೋಡಿ ಕಾಳಿಕಾಂಬಾ ನಿವಾಸ ಯಶೋಧ ಆಚಾರ್ಯ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ಜು.6 ರಂದು ಎಸ್.ಐ.ಆರ್ ಗೆಂದು ತೆರಳಿದ್ದಾರೆ. ಇವರ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಇಲ್ಲಿಗೆ ಬರುವುದಿಲ್ಲ” ಎಂದು ಹೇಳಿದ್ದು ಮನೆಯ ಸಿಟ್ ಔಟ್ ಗೆ ಪ್ರವೇಶ ನೀಡದೆ ಮೆಟ್ಟಿಲು ಬಳಿಯೇ ಮಾತಿನಲ್ಲಿಯೇ ತಡೆದು ನಿಲ್ಲಿಸಿ ಅಪಮಾನ ಮಾಡಿ ಜಾತಿ ನಿಂದನೆ ಮಾಡಿರುವುದಾಗಿ ಜು.7 ರಂದು ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ SC/ST act-2015(u/s-3(1)(r),3(2)(va)) ದಲಿತ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




