Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

    September 23, 2022
    Share

    ಉಡುಪಿ: ಪಿಎಫ್ ಐ ಸಂಘಟನೆ ಮುಖಂಡರ ಮನೆ ಮೇಲಿನ ದಾಳಿಯನ್ನು ಖಂಡಿಸಿ ಯಾವುದೇ ಅನುಮತಿ ಪಡೆಯದೇ ಉಡುಪಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಾಗಿದೆ.

    ಬೈಲಕೆರೆ ಮಲ್ಪೆ ನಿವಾಸಿ ಸಾದೀಕ್‌ ಅಹಮ್ಮದ್‌, ಮಲ್ಪೆ ಹೊಸತೋಟ ನಿವಾಸಿ ಅಫ್ರೋಜ್‌ ಕೆ,ಕಂಬ್ಲತೋಟ ನಿವಾಸಿ ಇಲಿಯಾಸ್‌ ಸಾಹೇಬ್‌, ಬ್ರಹ್ಮಾವರ ಸಾಸ್ತನ ನಿವಾಸಿ ಇರ್ಷಾದ್‌, ಸಾಸ್ತಾನ ಕೊಡಿರಸ್ತೆ ನಿವಾಸಿ ಫಯಾಜ್‌ ಅಹಮ್ಮದ್‌,ಅಂಬಲಪಾಡಿ ನಿವಾಸಿ ಮಹಮ್ಮದ್‌ ಅಶ್ರಫ್‌, ದೊಡ್ಡನಗುಡ್ಡೆ ನಿವಾಸಿ ಎ. ಹಾರೂನ್‌ ರಶೀದ್‌ ,ಬೈಲೂರು ನಿವಾಸಿ ಮೊಹಮ್ಮದ್‌ ಜುರೈಜ್‌, ಕೊಡವೂರು ಬಹುತೋಟ ನಿವಾಸಿ ಇಶಾಕ್‌ ಕಿದ್ವಾಯಿ, ಗುಂಡ್ಮಿ ನಿವಾಸಿ ಶೌಕತ್‌ ಅಲಿ, ಮಲ್ಪೆ ಬೈಲಕೆರೆ ರಸ್ತೆ ನಿವಾಸಿ ಮಹಮ್ಮದ್‌ ಝಹೀದ್‌ ಎಂಬವರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಗಳೂರಿನಲ್ಲಿ ನಡೆದ ಎನ್ಐಎ ದಾಳಿಯನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆಗೆ ನಿರ್ಧರಿಸಿದ್ದರು. ಆದ್ರೆ ಪೊಲೀಸರು ಪ್ರತಿಭಟನಕಾರರ ಮನವೊಲಿಸಿ, ಚದುರಿಸಿದ್ದರು. ಬಳಿಕ ಡಯಾನಾ ಸರ್ಕಲ್ ಬಳಿ ಗುಂಪುಗೂಡಿದ ಪಿಎಫ್ ಐ ಕಾರ್ಯಕರ್ತರು, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಉಡುಪಿ ನಗರ ಠಾಣಾ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರು. ಬಳಿಕ ಸಂಘಟನೆ ಮುಖಂಡರನ್ನು ಬಂಧಿಸಿದ್ದರು. ಇದೀಗ ವಾಹನ ಸಂಚಾರ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.

    Post Views: 174

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.