Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರ ರಕ್ಷಣೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರ ರಕ್ಷಣೆ

    February 2, 2024
    Share

    ಉಳ್ಳಾಲ : ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್‍ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಮಧ್ಯದಲ್ಲಿದ್ದ ಕಲ್ಲಿಗೆ ಬಡಿದು ಮುಳುಗಿದ್ದು,ಅಲ್ಲೇ ಮೀನುಗಾರಿಕೆ ನಡೆಸುತ್ತಿದ್ದ ಎರಡು ಬೋಟ್‍ನ ಮೀನುಗಾರರು ಮುಳುಗುತ್ತಿದ್ದ ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು ಬೋಟ್‍ಗೂ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ`ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ,ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್‍ನ ಮೀನುಗಾರರು ರಕ್ಷಿಸಿದ್ದಾರೆ. ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು,ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭ ಅವಘಡ ಸಂಭವಿಸಿದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.