Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಲೆಗಳಿಗೆ ಬಾಂಬ್‌ ಬೆದರಿಕೆ : ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ – ಖಾರಿಜೈಟ್ಸ್ ಹೆಸರಲ್ಲಿ ಇ-ಮೇಲ್
    ಇತ್ತೀಚಿನ ಸುದ್ದಿ

    ಶಾಲೆಗಳಿಗೆ ಬಾಂಬ್‌ ಬೆದರಿಕೆ : ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ – ಖಾರಿಜೈಟ್ಸ್ ಹೆಸರಲ್ಲಿ ಇ-ಮೇಲ್

    December 1, 2023
    Share

    ಬೆಂಗಳೂರು : ಇಂದು ಬೆಳ್ಳಂಬೆಳಿಗ್ಗೆ ಸಿಲಿಕಾನ್‌ ಸಿಟಿಯಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇ-ಮೇಲ್​ ವೊಂದು ಬಂದಿದೆ. ಇದರಿಂದ ಶಾಲಾ ಆಡಳಿತ ಮಂಡಳಿ,ಮಕ್ಕಳು ಪೋಷಕರು ಆತಂಕಗೊಂಡ ಘಟನೆಯೂ ನಡೆದಿದೆ. ಈ ವಿಷಯ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಎಲ್ಲಿಂದ ಮೇಲ್ ಬಂದಿದೆ ಎಂದು ಪರಿಶೀಲಿಸಿದಾಗ ನಿಜಕ್ಕೂ ಶಾಕ್‌ ಆಗಿದೆ. ಹೌದು ಬಾಂಬ್‌ ಬೆದರಿಕೆ ಬರುತ್ತಿದ್ದಂತೆ ಮಕ್ಕಳನ್ನು ಮನೆಗೆ ಕಳುಹಿಸಿ ಶಾಲೆ ರಜೆ ಘೋಷಣೆ ಮಾಡಿ ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇ-ಮೇಲ್ ಬೆದರಿಕೆ ಮುಜಾಹಿದ್ದಿನ್ ಹೆಸರಲ್ಲಿ ಬಂದಿದೆ. ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಕೂಡ ಅಲ್ಲಾಹುವಿನ ವಿರೋಧಿಗಳು. ನೀವೆಲ್ಲರೂ ಸಾಯಲು ಸಿದ್ಧರಾಗಿರಿ ‘ಎಂದು ಇಮೇಲ್​ನಲ್ಲಿ ಬರೆಯಲಾಗಿದೆ. ಆದ್ರೆ, ಮುಜಾಹಿದ್ದಿನ್ ಯಾರು? ಎಲ್ಲಿಂದ ಈ ಇ-ಮೇಲ್ ಬಂದಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಂದೂ-ಮುಸ್ಲಿಂ ಗಲಾಟೆಗಳ ಮಧ್ಯೆ ಈ ರೀತಿ ಬೆದರಿ ಹಾಕಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಹಿಂದೆ ಅನೇಕ ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಆದ್ರೆ, ಬಾರಿ ಉಗ್ರವಾದ ಪದಗಳೊಂದಿಗೆ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಸವೇಶ್ವರ ನಗರದ ಶಾಲೆಯ ಮೂಲೆ ಮೂಲೆಯಲ್ಲಿ ತಪಾಸಣೆ ಮಾಡುತ್ತಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮಕೈಗೊಳ್ಳುತ್ತೇವೆ. ಪೋಷಕರು, ಮಕ್ಕಳು ಯಾರೂ ಆತಂಕ ಪಡುವ ಅಗತ್ಯವಿಲ್ಲ​​​. ಇ-ಮೇಲ್ ಬೆದರಿಕೆ ಪ್ರಕರಣವನ್ನು ಲಘುವಾಗಿ ಪರಿಗಣಿಸುವುದಿಲ್ಲ. ಇಂತಹ ಬೆದರಿಕೆ ಹಾಕುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದರು. ಟೈಪ್ ಮಾಡಿದ್ದನು ನೋಡಿದ್ರೆ ಹೈ ಲೆವೆಲ್ ಟೆರರಿಸ್ಟ್ ತರ ಕಾಣುತ್ತೆ. ಅಲ್ಲಾಹ್ ಗೆ ತೊಂದರೆ ಮಾಡುತ್ತಿದ್ದಿರಿ, ಮುಂಬೈನಲ್ಲಿ ಗಲಾಟೆ ಮಾಡಿದ್ರಿ ಹೀಗೆಲ್ಲಾ ಮೆಸೇಜ್ ಮಾಡಿದ್ದಾರೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್ ,ಡಾಗ್ ಸ್ಕ್ವಾಡ್ ಬಂದಿದೆ . ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ ಹದಿನೈದು ಶಾಲೆಗೆ ಮೇಲ್ ಬಂದಿದೆ . ಜನರಲ್ಲಿ ಆತಂಕ ಶುರುವಾಗಿದೆ ಎಂದು ಹೇಳಿದರು.

    Post Views: 283

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.