ಕಡಬ : ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಡಬ ಆಲಂಕಾರಿನ ಆಟೋ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ, ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಕಮಲಾಕ್ಷ ಗೌಡ(44ವ.)ಮೃತಪಟ್ಟವರಾಗಿದ್ದಾರೆ. ಜೂ.20ರಂದು ಬೆಳಿಗ್ಗೆ ಮನೆಯಲ್ಲಿ ಕಮಲಾಕ್ಷರವರು ಬ್ರೈನ್ ಎಮರೇಜ್ಗೆ ತುತ್ತಾಗಿ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ತಕ್ಷಣ ಅವರ ಸಹೋದರ ಆಲಂಕಾರಿನ ಕ್ಲಿನಿಕ್ಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರ ಸಲಹೆಯಂತೆ ಅದೇ ದಿನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಕ್ಷ ಗೌಡರವರು ಚಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕಮಲಾಕ್ಷ ಗೌಡರವರು ಕಳೆದ 5 ವರ್ಷಗಳಿಂದ ಆಲಂಕಾರಿನಲ್ಲಿ ಬಾಡಿಗೆ ರಿಕ್ಷಾ ಓಡಾಟ ನಡೆಸುತ್ತಿದ್ದರು.