ಉಪ್ಪಿನಂಗಡಿ: ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆಯಾದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಅ. 18ರ ರಾತ್ರಿ ನಡೆದಿದೆ. ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿತ್ತು.
ಈ ವೇಳೆ ಮಂಜುನಾಥ್ ಎಂಬಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಹಾಗೂ ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.




