Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ-ಕೊಲೆಯಲ್ಲಿ ಅಂತ್ಯ
    ಇತ್ತೀಚಿನ ಸುದ್ದಿ

    ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ-ಕೊಲೆಯಲ್ಲಿ ಅಂತ್ಯ

    September 8, 2024
    Share

    ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಹೋದರರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ ನಡೆದಿದೆ.

    ಸಂದೇಶ್ ಪ್ರಭಾಕರ್ ಬೋರ್ಕರ್, ಹತ್ಯೆಯಾದ ವ್ಯಕ್ತಿ. ಮನೀಶ್ ಕಿರಣ್ ಬೋರ್ಕರ್ ಹತ್ಯೆ ಮಾಡಿದ ಆರೋಪಿ.

    ಘಟನೆಯಲ್ಲಿ ಶರತ್ ಎಂಬಾತ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಪ್ರತೀ ವರ್ಷ ಗಣಪತಿ ಹಬ್ಬದಂದು ಶಿರಸಿಯಿಂದ ಬರುವ ಕುಟುಂಬಸ್ಥರು ಕಾರವಾರದಲ್ಲಿ ಎಲ್ಲರೂ ಸೇರಿ ಗಣೇಶನ ಹಬ್ಬ ಮಾಡ್ತಿದ್ರು. ಪ್ರಭಾಕರ್ ಎಂಬವರು ಕಳೆದ ವರ್ಷದ ಹಣದ ಲೆಕ್ಕ ನೀಡಿಲ್ಲ ಎಂದು ಕುಟುಂಬಸ್ಥರು ಗಲಾಟೆ ಎಬ್ಬಿಸಿದರು. ಈ ವೇಳೆ ಪ್ರಭಾಕರ್ ಮಕ್ಕಳಾದ ಸಂದೇಶ ಹಾಗೂ ಶರತ್ ಸಹಾಯಕ್ಕೆ ಬಂದಿದ್ರು. ಇದನ್ನು ನೋಡಿ ಪ್ರಭಾಕರ್ ತಂಗಿ ಮಕ್ಕಳಾದ ಕಿರಣ್, ಪ್ರಶಾಂತ್, ರತನ್, ಮನೀಶ್ ಗಲಾಟೆ ಮಾಡಿದ್ದಾರೆ. ಗಲಾಟೆ ವೇಳೆ ಕೈಕೈ ಮಿಲಾಯಿಸಿದ್ದಾರೆ. ಈ ವೇಳೆ ಉಳಿದವರು ಸಂದೇಶನನ್ನು ಕೆಳಗೆ ಬೀಳಿಸಿದ್ರೆ, ಮನೀಶ್ ಚಾಕು ಹಿಡಿದು ಹೊಟ್ಟೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಂದೇಶ ಮೃತಪಟ್ಟಿದ್ದಾರೆ.

    ಈ ಕುರಿತು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಮನೀಶ್ ಕಿರಣ್ ಮತ್ತಿತರ ರನ್ನು ಬಂಧಿಸಿದ್ದಾರೆ. ಕೊಲೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ ಕುರಿತು ತನಿಖೆ ಮುಂದುವರೆಸಿದ್ದಾರೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.