Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಕಲ್ಯಾಣ ಮಂಟಪದಲ್ಲಿ ವರನನ್ನು ಕಾದು ಕಾದು ಸುಸ್ತಾದ ವಧು …! ಕೋಪಗೊಂಡ ವಧು ಮಾಡಿದ್ದೆನು ಗೂತ್ತಾ..?ಸುಳ್ಯ:
    ಇತ್ತೀಚಿನ ಸುದ್ದಿ

    ಸುಳ್ಯ: ಕಲ್ಯಾಣ ಮಂಟಪದಲ್ಲಿ ವರನನ್ನು ಕಾದು ಕಾದು ಸುಸ್ತಾದ ವಧು …! ಕೋಪಗೊಂಡ ವಧು ಮಾಡಿದ್ದೆನು ಗೂತ್ತಾ..?ಸುಳ್ಯ:

    February 9, 2023
    Share

    ಸುಳ್ಯದ ಪುರಭವನದಲ್ಲಿ ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು , ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದೆ.

    ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಫೆ.9ರಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯ ಬಂದುಮಿತ್ರರು ಆಗಮಿಸಿದ್ದು ಟೌನ್‌ಹಾಲ್ ಅಲಂಕಾರವೂ ನಡೆದಿತ್ತು. ಫೆ.8ರಂದು ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಮದುವೆ ಸಂಭ್ರಮ ಕಳೆಗಟ್ಟಿತ್ತು. ವಧುವಿನ ಕಡೆಯವರು ಮದುವೆಗಾಗಿ ಹಾಲ್ ಗೆ ಆಗಮಿಸಿ ಮದುವೆ ಸಿದ್ಧತೆ ನಡೆಸುತ್ತಿದ್ದರು. 500 ಮಂದಿಗೆ ಭೋಜನದ ವ್ಯವಸ್ಥೆ ಕೂಡ ಮಾಡಲಾಗಿತ್ತು.

    ಇದ್ದಕ್ಕಿದ್ದಂತೆ ವರ ಕಾಣುತ್ತಿಲ್ಲ ಎಂದು ಮಾಹಿತಿ ಬಂದಿದ್ದು ಮದುಮಗನ ಫೋನ್ ನಂಬರಿಗೆ ಕರೆ ಮಾಡಿದಾಗ ಸ್ವಿಚ್‌ಆಫ್ ಆಗಿತ್ತು. ಹೀಗಾಗಿ ವಧುವಿನ ಕಡೆಯವರು ಕಂಗಾಲಾಗಿದ್ದರು. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

    ಈ ಬೆಳವಣಿಗೆಯಿಂದ ವರನಿಗೆ ಈ ಹಿಂದೆ ಒಂದು ಮದುವೆಯಾಗಿದ್ದು,‌ ಆತನ ಹೆಂಡತಿ ಗಂಡನ ವಿರುದ್ಧ ಬೆಳ್ಳಾರೆ ಪೋಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದಾಳೆ ಎಂಬ ಅಚ್ಚರಿಯ ಮಾಹಿತಿ ಹೊರ ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆ ವಧುವಿನ ಕಡೆಯವರು ಸಭಾಂಗಣದಿಂದ ತೆರಳಿದ್ದು ಮದುವೆ ರದ್ದುಗೊಂಡಿದೆ. ಸಿದ್ಧಗೊಂಡಿದ್ದ ಊಟವನ್ನು ಸಮೀಪದ ಹಾಸ್ಟೆಲ್‌ಗಳಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.