Facebook Twitter Instagram
    Wednesday, June 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»17 ಕೋಟಿ ರೂ. ಮದುವೆ ಸಿದ್ಧತೆ ನಡುವೆಯೇ ಭಾವಿ ಪತಿಯನ್ನು ಕಂದಕಕ್ಕೆ ತಳ್ಳಿ ಕೊಂದ ವಧು
    ಇತ್ತೀಚಿನ ಸುದ್ದಿ

    17 ಕೋಟಿ ರೂ. ಮದುವೆ ಸಿದ್ಧತೆ ನಡುವೆಯೇ ಭಾವಿ ಪತಿಯನ್ನು ಕಂದಕಕ್ಕೆ ತಳ್ಳಿ ಕೊಂದ ವಧು

    June 24, 2026
    Share

    ಮುಂಬೈ: ಪ್ರಿ-ವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಮಹಿಳೆ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿನಡೆದಿದ್ದು, ಮದುವೆಗಾಗಿ 17 ಕೋಟಿ ಮೌಲ್ಯದ ಅರಮನೆಯನ್ನು ಬುಕ್ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ.

    ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ ಕೇತನ್ ಅಗರ್ವಾಲ್ ಮೃತ ವ್ಯಕ್ತಿ. ಜೂನ್ 18ರಂದು ಲೋನಾವಾಲಾ ಸಮೀಪದ ಲೋಹಗಢ ಕೋಟೆಗೆ ಭಾವಿ ಪತ್ನಿ ಸಿಯಾ ಗೋಯಲ್ ಜೊತೆ ಪ್ರಿ-ವೆಡ್ಡಿಂಗ್ ಶೂಟ್‌ಗೆ ತೆರಳಿದ್ದ. ಅಲ್ಲಿಯೇ ಸಿಯಾ ಗೋಯಲ್, ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಾಳೆ.ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕೇತನ್ ಮತ್ತು ಸಿಯಾ ಗೋಯಲ್ ಅವರ ಅದ್ಧೂರಿ ಮದುವೆ ನಿಗದಿಯಾಗಿತ್ತು. ಮದುವೆಗಾಗಿ 17 ಕೋಟಿ ರೂ. ವೆಚ್ಚದ ಅರಮನೆಯನ್ನು ಬುಕ್ ಮಾಡಲಾಗಿತ್ತು. ಅತಿಥಿಗಳಿಗಾಗಿ ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಸಿಯಾಗೆ ಈ ಮದುವೆ ಇಷ್ಟವಿರಲಿಲ್ಲ. ಆದ್ದರಿಂದ ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆ ಜೀವನ ಸಾಗಿಸಲು ಕೇತನ್ ಅಡ್ಡಿಯಾಗಿದ್ದಾನೆ ಎಂದು ಭಾವಿಸಿ ಹತ್ಯೆಗೆ ಸಂಚು ರೂಪಿಸಿದ್ದಳು.ಗೋಯಲ್ ತನ್ನ ಹುಟ್ಟುಹಬ್ಬದ ನೆಪದಲ್ಲಿ ಕೇತನ್‌ನನ್ನು ಲೋಹಗಢ ಕೋಟೆಗೆ ಕರೆದೊಯ್ದು, ಪ್ರಿಯಕರನ ಸಹಾಯದಿಂದ ಆಳವಾದ ಕಂದಕಕ್ಕೆ ತಳ್ಳಿದ್ದಾಳೆ. ತನಿಖೆಯಲ್ಲಿ ಚೇತನ್ ಕೂಡ ಘಟನೆ ನಡೆದ ಸ್ಥಳದಲ್ಲಿದ್ದ ಎಂಬುದು ದೃಢಪಟ್ಟಿದ್ದು, ಕೇತನ್ ಹತ್ಯೆಗೆ ಸಂಚು ರೂಪಿಸಿದ್ದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಸದ್ಯ ಇಬ್ಬರೂ ಆರೋಪಿಗಳು ಪೊಲೀಸ್ ವಶದಲ್ಲಿದ್ದು, ತನಿಖೆ ಮುಂದುವರಿದಿದೆ.

    Post Views: 9

    CrimeNews PoliceInvestigation

    Related Posts

    ಮಂಗಳೂರು: OLX ಮೂಲಕ ಐಷಾರಾಮಿ ಬೈಕ್ ಮೋಸ; ಹಣ ಕಳೆದುಕೊಂಡ ತಂದೆ-ಮಗ

    June 24, 2026

    ಹೆಚ್ಚಿನ ಲಾಭದ ಆಸೆಗೆ ಬಿದ್ದು ₹3.5 ಲಕ್ಷ ಕಳೆದುಕೊಂಡ ಮಹಿಳೆ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ

    June 24, 2026

    ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ

    June 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: OLX ಮೂಲಕ ಐಷಾರಾಮಿ ಬೈಕ್ ಮೋಸ; ಹಣ ಕಳೆದುಕೊಂಡ ತಂದೆ-ಮಗ

    June 24, 2026

    17 ಕೋಟಿ ರೂ. ಮದುವೆ ಸಿದ್ಧತೆ ನಡುವೆಯೇ ಭಾವಿ ಪತಿಯನ್ನು ಕಂದಕಕ್ಕೆ ತಳ್ಳಿ ಕೊಂದ ವಧು

    June 24, 2026

    ಹೆಚ್ಚಿನ ಲಾಭದ ಆಸೆಗೆ ಬಿದ್ದು ₹3.5 ಲಕ್ಷ ಕಳೆದುಕೊಂಡ ಮಹಿಳೆ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚನೆ

    June 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.