ಬೆಳ್ತಂಗಡಿ: ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ನಡೆದಿದೆ.

ಬೆಳಾಲು ಗ್ರಾಮದ ನಿವಾಸಿ ಇಪ್ಪತ್ತೈದು ವರ್ಷದ ಪ್ರವೀಣ್ ಮೃತ ದುರ್ದೈವಿಯಾಗಿದ್ದಾನೆ. ಇವರು ಮಂಗಳೂರಿನ ಬ್ಯಾಂಕೊಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಅಚಾನಕ್ ಆಗಿ ಮರದ ಕೊಂಬೆ ಮುರಿದು ಅವರ ಬೈಕ್ ಮೇಲೆ ಬಿದ್ದಿದೆ. ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದಾದರೂ ಯಾವುದೇ ಪ್ರಯೋಜನವಾಗದೆ ಮೃತಪಟ್ಟಿದ್ದಾರೆ.