Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬುರ್ಖಾ ಧರಿಸಿದ ಯುವತಿಯರ ಮೇಲೆ ಹಲ್ಲೆ!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬುರ್ಖಾ ಧರಿಸಿದ ಯುವತಿಯರ ಮೇಲೆ ಹಲ್ಲೆ!

    October 11, 2022
    Share

    ಬಂಟ್ವಾಳ: ನಾಪತ್ತೆಯಾದ ಬಾಲಕಿಯರನ್ನು ಹುಡುಕಿಕೊಂಡು ಬಂದ ಯುವಕರು ಬಸ್ ನಿಲ್ದಾಣದಲ್ಲಿ ನಿಂತಿದ್ದ ಬುರ್ಖಾ ಧರಿಸಿದ್ದ ಯುವತಿಯರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ವಿಟ್ಲ ಬಸ್ ನಿಲ್ದಾಣದಲ್ಲಿ ಕುದ್ದುಪದವು ಮೂಲದ ಇಬ್ಬರು ಯುವತಿಯರು ಹಲ್ಲೆಗೊಳಗಾಗಿದ್ದಾರೆ. ಗಾಯಗೊಂಡ ಇಬ್ಬರು ಯುವತಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಹಲ್ಲೆ ನಡೆಸಿದವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರ ರಾತ್ರಿ ಘಟನೆ ನಡೆದಿದ್ದು, ಎಲ್ಲರೂ ಒಂದೇ ಸಮುದಾಯಕ್ಕೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

    ಪ್ರಕರಣದ ವಿವರ: ಮುಸ್ಲಿಂ ಸಮುದಾಯದ ಇಬ್ಬರು ಬಾಲಕಿಯರು ಇತ್ತೀಚೆಗೆ ಮನೆ ಬಿಟ್ಟು ತೆರಳಿದ್ದರು. ಅವರನ್ನು ಹುಡುಕಿಕೊಂಡು ಅವರ ಊರಿನ ಯುವಕರು ಹೊರಟಿದ್ದಾರೆ. ಆದರೆ ನಾಪತ್ತೆಯಾದವರೇ ಎಂದು ಭಾವಿಸಿ ಬಸ್​ ನಿಲ್ದಾಣದಲ್ಲಿ ಸಿಕ್ಕ ಬೇರೆ ಅಮಾಯಕ ಯುವತಿಯರ ಮೇಲೆ ಹಲ್ಲೆ ನಡೆಸಿದ್ದಾರೆ.

    ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಸಾಲೆತ್ತೂರು ಮೂಲದ ಬಾಲಕಿಯೊಬ್ಬಳು ಮನೆಯಿಂದ ಸ್ನೇಹಿತೆಯೊಂದಿಗೆ ತೆರಳಿದ್ದಳು. ಆಕೆಯನ್ನು ಹುಡುಕುತ್ತ ವಿಟ್ಲಕ್ಕೆ ಬಂದಿದ್ದ ಯುವಕರು ಬಸ್ ನಿಲ್ದಾಣದಲ್ಲಿ ನಿಂತಿದ್ದ ಇಬ್ಬರು ಬುರ್ಖಾಧಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಬುರ್ಖಾ ತೆರೆದಾಗ ಅವರು ಬೇರೆಯವರು ಎಂಬುದು ಗೊತ್ತಾಗಿದೆ. ಸಾರ್ವಜನಿಕರು ನೈತಿಕ ಪೊಲೀಸ್ ಗಿರಿ ನಡೆಸಿದವರನ್ನು ಹಿಡಿದು ಪೊಲೀಸ್​ ಠಾಣೆಗೆ ಒಪ್ಪಿಸಿದ್ದಾರೆ.

    Post Views: 199

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.