Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮನೆಗೆ ವಾಪಾಸಾಗುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಉಡುಪಿ: ಮನೆಗೆ ವಾಪಾಸಾಗುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ; ಗಂಭೀರ ಗಾಯ

    September 16, 2024
    Share

    ಶಿರ್ವ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಾಲಕಿಗೆ ಶಾಲಾ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಭಾನುವಾರ (ಸೆ. 15 ರಂದು) ಕಾಪು-ಶಿರ್ವ ರಸ್ತೆಯ ಬಾಲಾಜಿ ರೆಸ್ಟೋರೆಂಟ್‌ ಬಳಿ ನಡೆದಿದೆ.

    ಶಿರ್ವ ನಿವಾಸಿ ಜೋಸೆಫ್‌ ಮಸ್ಕರೇನಸ್‌ ಅವರ ಪುತ್ರಿ ಮರ್ಲಿನ್‌ ಮಸ್ಕರೇನಸ್‌ (12) ಗಂಭೀರ ಗಾಯಗೊಂಡ ಬಾಲಕಿ .ಶಿರ್ವ ಡಾನ್‌ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಈಕೆ ಶಾಲೆಯ ಅನುಮತಿಯಂತೆ ಎರ್ಮಾಳಿನಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಳು. ಶಾಲಾ ಬಸ್ಸಿನಲ್ಲಿ ವಾಪಾಸು ಬಂದ ಈಕೆ ತನ್ನ ಮನೆಯ ಬಳಿ ಇಳಿದು ಬಸ್‌ನ ಮುಂಭಾಗದಿಂದ ಬಲಭಾಗದಲ್ಲಿರುವ ತನ್ನ ಮನೆಗೆ ಬರುವಾಗ ಬಸ್‌ನ ಹಿಂಭಾಗದಿಂದ ಬಂದ ಮತ್ತೂಂದು ಬಸ್‌ ಓವರ್‌ಟೇಕ್‌ ಮಾಡುವ ಭರದಲ್ಲಿ ವೇಗವಾಗಿ ಬಂದು ಬಾಲಕಿಗೆ ಢಿಕ್ಕಿ ಹೊಡೆದಿದೆ.

    ಪರಿಣಾಮ ಬಾಲಕಿಯ ಪಕ್ಕೆಲುಬು,ತಲೆ ,ಕಣ್ಣು ಹಾಗೂ ಬಲಭುಜಕ್ಕೆ ತೀವ್ರ ಸ್ವರೂಪದ ಗಾಯವಾಗಿದ್ದು, ಗಂಭೀರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯ ತಂದೆ ನೀಡಿದ ದೂರಿನಂತೆ ಬಸ್‌ ಚಾಲಕ ಅಬ್ದುಲ್‌ ಬಶೀರ್‌ ವಿರುದ್ಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 188

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.