Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಸಿರೋಡು‌ ನಿವಾಸಿ ಬಸ್ ಪ್ರಯಾಣಿಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ
    ಇತ್ತೀಚಿನ ಸುದ್ದಿ

    ಬಿಸಿರೋಡು‌ ನಿವಾಸಿ ಬಸ್ ಪ್ರಯಾಣಿಕನಿಗೆ ಸಂಘಪರಿವಾರದ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

    December 15, 2022
    Share

    ಮೂಡಬಿದಿರೆ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಲ್ಲರಪಟ್ನ ನಿವಾಸಿ 45 ವರ್ಷದ ಇಸ್ಹಾಕ್ ಎಂಬವರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಯಿ ಎಂಬಲ್ಲಿ ನಡೆದಿದೆ. ಈಗ ಬಿಸಿರೋಡಿನಲ್ಲಿ ವಾಸವಿರುವ ಇಸ್ಹಾಕ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ನಿನ್ನೆ ಬೆಳಗ್ಗೆ ಬಿ.ಸಿ.ರೋಡ್ ನಿಂದ ಮೂಡುಬಿದಿರೆಗೆ ತೆರಳಲೆಂದು ಖಾಸಗಿ ಬಸ್ ಹತ್ತಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರ ದಟ್ಟಣೆಯಿದ್ದುರಿಂದ ಇಸ್ಹಾಕ್ ಕುಳಿತಿದ್ದ ಸೀಟಿನ ಬಳಿ ನಿಂತಿದ್ದ ಮಹಿಳೆಯೊಬ್ಬರು ಬ್ಯಾಗ್ ಹಿಡಿದುಕೊಳ್ಳುವಂತೆ ಇಸ್ಹಾಕ್ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.

    ಮಹಿಳೆ ತಾನು ಇಳಿಯುವ ಜಾಗ ತಲುಪಿದಾಗ ಇಸ್ಹಾಕ್ ಅವರಿಂದ ಬ್ಯಾಗ್ ಪಡೆದು ಬಸ್ಸಿನಿಂದ ಇಳಿದು ಹೋದರೆನ್ನಲಾಗಿದೆ. ಬಳಿಕ ಕಂಡೆಕ್ಟರ್ ಇಸ್ಹಾಕ್ ಅವರನ್ನು ಬಸ್ಸಿನಿಂದ ಕೆಳಗಿಳಿಸಿ ಅವರಿಗೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಕೆಲವು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಕೆಲವು ಯುವಕರನ್ನು ಕರೆಸಿ ಇಸ್ಹಾಕ್ ಅವರನ್ನು ಒಪ್ಪಿಸಿದ್ದಾನೆ.

    ಬಳಿ ಕದುಷ್ಕರ್ಮಿಗಳ ಗುಂಪು ಇಸ್ಹಾಕ್ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ಹಲ್ಲೆಯಿಂದ ಇಸ್ಹಾಕ್ ಅವರ ಬೆನ್ನು, ಕೈ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ಬಳಿಕ ಗುಂಪು ಇಸ್ಹಾಕ್ ಅವರನ್ನು ಗುಂಪು ಪೊಲೀಸರಿಗೆ ಹಸ್ತಾಂತರಿಸಿದೆ.ಪೊಲೀಸರು ಇಸ್ಹಾಕ್ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

    ವಿಷಯ ತಿಳಿದು ಇಸ್ಹಾಕ್ ಅವರ ಕುಟುಂಬದವರು ಠಾಣೆಗೆ ಬಂದಿದ್ದು, ಸಂಜೆ 5:30ರವರೆಗೆ ಇಸ್ಹಾಕ್ ಅವರನ್ನು ಠಾಣೆಯಲ್ಲೇ ಕೂರಿಸಲಾಗಿತ್ತು. ಬಳಿಕ ಇಸ್ಹಾಕ್ ಅವರಿಂದ ಹೇಳಿಕೆ ಪಡೆದು ಕುಟುಂಬದೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ವರದಿಯಾಗಿದೆ.

    ಇದೀಗ ಇಸ್ಹಾಕ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    Post Views: 209

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.