Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ- ಬಸ್ ನಿರ್ವಾಹಕನ ಬಂಧನ
    ಇತ್ತೀಚಿನ ಸುದ್ದಿ

    ಕಡಬ: ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತ ವರ್ತನೆ- ಬಸ್ ನಿರ್ವಾಹಕನ ಬಂಧನ

    March 9, 2024
    Share

    ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9 ರಂದು ನಡೆದಿದೆ.

    ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ.ತಾನು ಇಳಿಯುವ ಸ್ಥಳ ಬಂದಾಗ ಮೈ‌ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ನಿರ್ವಾಹಕ ಸೂಚಿಸಿದ್ದ ಎಂದು‌ ಆರೋಪಿಸಲಾಗಿದೆ.

    ಬಸ್ ನಿಲ್ಲಿಸದೆ ಅನುಚಿತ ವರ್ತನೆ ತೋರಿದ ಬಗ್ಗೆ ಯುವತಿ ಪರಿಚಿತರಿಗೆ ಮಾಹಿತಿ ನೀಡಿದ ಹಿನ್ನೆಲೆ ಕಡಬ ಸಮೀಪದ ಕಳಾರ ಮಸೀದಿ ಬಳಿ ಬಸ್ ನ್ನು ಭೀಮ್ ಆರ್ಮಿ ಸಂಘಟನೆಯ ಸದಸ್ಯರು ತಡೆದು ನಿಲ್ಲಿಸಿದ್ದರು. ಬಳಿಕ ಠಾಣೆ ಬಳಿ ನಿಲ್ಲಿಸಲು ಸೂಚಿಸಿದ್ದರು.

    ಆಲಂಕಾರಿನಲ್ಲಿ‌ ಇಳಿಯುವ ವೇಳೆ ತನ್ನ ಮೈ ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ಒತ್ತಾಯ ಪೂರ್ವಕವಾಗಿ ಕಡಬದತ್ತ ಕರೆದುಕೊಂಡು ಬಂದಿರುವುದಾಗಿ ಯುವತಿ‌ ಕವಿತಾ ಎಂಬವರು KA 21F3276 ಬಸ್ಸಿನ ನಿರ್ವಾಹಕನ ವಿರುದ್ದ ಸೂಕ್ತ   ಕಾನೂನು ಕ್ರಮ ಕೈಗೊಳ್ಳುವಂತೆ ಠಾಣೆಗೆ   ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದರು. 

    ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಮುಂದೆಕ್ಕೆ ತೆರಳಲು ಪೊಲೀಸರು ಪರ್ಯಾಯವಾಗಿ ಬೇರೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ ನಿರ್ವಾಹಕನ್ನು ಠಾಣೆಗೆ ಕರೆದೊಯ್ದಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಮುಚ್ಚಳಿಕೆ ಬರೆಸಿ ಮುಂದೆ ಪ್ರಯಾಣಿಕರ ಜೊತೆ ಸಭ್ಯತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿರುವುದಾಗಿ ತಿಳಿದು ಬಂದಿದೆ.ಅಲ್ಲದೆ ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಯ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೋಡಿರುವುದಾಗಿ ತಿಳಿದು ಬಂದಿದೆ.

    Post Views: 206

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.