Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಧ್ಯರಾತ್ರಿ ಗುಪ್ತ ಕಾರ್ಯಾಚರಣೆ: ಆಯುಕ್ತೆ ಸುಮತಿ ಅವರ ದಿಟ್ಟ ಹೆಜ್ಜೆಗೆ 40ಕ್ಕೂ ಹೆಚ್ಚು ಗೂಂಡಾಗಳ ಬಂಧನ
    ಇತ್ತೀಚಿನ ಸುದ್ದಿ

    ಮಧ್ಯರಾತ್ರಿ ಗುಪ್ತ ಕಾರ್ಯಾಚರಣೆ: ಆಯುಕ್ತೆ ಸುಮತಿ ಅವರ ದಿಟ್ಟ ಹೆಜ್ಜೆಗೆ 40ಕ್ಕೂ ಹೆಚ್ಚು ಗೂಂಡಾಗಳ ಬಂಧನ

    May 6, 2026
    Share

    ಹೈದರಾಬಾದ್: ಸಿನೆಮಾ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದರಲ್ಲಿ ಮಲ್ಕಾಜ್‌ಗಿರಿ ಪೊಲೀಸ್ ಆಯುಕ್ತೆ ಐಪಿಎಸ್ ಸುಮತಿ ಅವರು ಗೂಂಡಾಗಳಿಗೆ ಮರೆಯಲಾಗದ ಪಾಠ ಕಲಿಸಿದ್ದಾರೆ. ಮಧ್ಯರಾತ್ರಿ ಯಾವುದೇ ಭದ್ರತೆಯಿಲ್ಲದೆ, ಒಬ್ಬ ಸಾಮಾನ್ಯ ಮಹಿಳೆಯಂತೆ ದಿಲ್‌ಸುಖ್‌ನಗರ ಬಸ್ ನಿಲ್ದಾಣದಲ್ಲಿ ನಿಂತು, ಕಿರುಕುಳ ನೀಡಲು ಬಂದ 40ಕ್ಕೂ ಹೆಚ್ಚು ಕಾಮುಕರನ್ನು ಜೈಲಿಗಟ್ಟಿದ್ದಾರೆ.

    ಮಲ್ಕಾಜ್‌ಗಿರಿ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಸುಮತಿ ಅವರು ಶಾಕ್ ಟ್ರೀಟ್ಮೆಂಟ್ ನೀಡಲು ನಿರ್ಧರಿಸಿದ್ದರು. ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆಯವರೆಗೆ ಅವರು ಒಬ್ಬಂಟಿಯಾಗಿ ರಸ್ತೆಯಲ್ಲಿ ನಿಂತು ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲಿಯವರೆಗೆ ಯಾವುದೇ ಪೊಲೀಸ್ ಗಸ್ತು ವಾಹನಗಳು ಕಾಣಿಸಿಕೊಳ್ಳದಿರುವುದು ನಮ್ಮ ವ್ಯವಸ್ಥೆಯ ವೈಫಲ್ಯವನ್ನೂ ಎತ್ತಿ ತೋರಿಸಿತು.
    ಮದ್ಯ ಮತ್ತು ಗಾಂಜಾ ಅಮಲಿನಲ್ಲಿದ್ದ ಹೆಚ್ಚಿನ ಗೂಂಡಾಗಳು (ಅದರಲ್ಲೂ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು) ಸುಮತಿಯವರನ್ನು ಸುತ್ತುವರೆದು ಅಶ್ಲೀಲ ಪ್ರಶ್ನೆಗಳನ್ನು ಕೇಳುತ್ತಾ ಕಿರುಕುಳ ನೀಡಲು ಆರಂಭಿಸಿದರು. ಬೈಕ್‌ಗಳನ್ನು ಅಡ್ಡ ನಿಲ್ಲಿಸಿ ಅಸಭ್ಯವಾಗಿ ವರ್ತಿಸಿದರು. ಆದರೆ ಸುಮತಿ ಅವರು ಧೈರ್ಯಗುಂದದೆ ಎಲ್ಲವನ್ನೂ ಗಮನಿಸುತ್ತಿದ್ದರು. ಸುಮಾರು 3:30ಕ್ಕೆ ಬೀಟ್ ಕಾನ್‌ಸ್ಟೆಬಲ್ ಬಂದು ಎಸ್‌ಐ ಅವರು ಸೆಲ್ಯೂಟ್ ಹೊಡೆದಾಗಲೇ ಗೂಂಡಾಗಳಿಗೆ ತಾವು ಕೆಣಕಿದ್ದು ಸಾಕ್ಷಾತ್ ಪೊಲೀಸ್ ಆಯುಕ್ತರನ್ನು ಎಂಬ ಸತ್ಯ ಅರಿವಾಗಿದ್ದು!

    Post Views: 194

    PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.