Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಸದ ಕೋಟ ತೆರವಾದ ಸ್ಥಾನಕ್ಕೆ ವಿಧಾನಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ಕ್ಕೆ ಉಪಚುನಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಸದ ಕೋಟ ತೆರವಾದ ಸ್ಥಾನಕ್ಕೆ ವಿಧಾನಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ಕ್ಕೆ ಉಪಚುನಾವಣೆ

    September 20, 2024
    Share

    ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಈ ಬಗ್ಗೆ ಮಾತನಾಡಿ, ವಿಧಾನ ಪರಿಷತ್ ಸ್ಥಾನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ.

    ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಅವಕಾಶವಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಅಕ್ಟೋಬರ್ 7ರಂದು ನಾಮಪತ್ರ ವಾಪಸ್‌ಗೆ ಕೊನೆ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ ಎಂದರು. ಆದ್ದರಿಂದ ಸೆಪ್ಟೆಂಬರ್ 19ರಿಂದಲೇ ಮಾದರಿ ನೀತಿಸಂಹಿತೆ ಜಾರಿಗೊಂಡಿದ್ದು, ಅಕ್ಟೋಬರ್ 28ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸರಕಾರದ ಯಾವುದೇ ಅಭಿವೃದ್ಧಿಪರ ಕಾರ್ಯಗಳ ಘೋಷಣೆ ಮಾಡುವಂತಿಲ್ಲ. ಗುದ್ದಲಿ ಪೂಜೆ, ಶಿಲಾನ್ಯಾಸ ನಡೆಸುವಂತಿಲ್ಲ. ಶುಭಾಶಯ ಕೋರಿ ರಾಜಕೀಯ ನಾಯಕರ, ಅಭ್ಯರ್ಥಿಗಳ ಬ್ಯಾನರ್ ಅಳವಡಿಸುವಂತಿಲ್ಲ. ಅಧಿಕಾರಿಗಳು ಕಾರ್ಯಕ್ರಮ ಯಾವುದೇ ಸರ್ಕಾರಿ ಹಾಗೂ ಸಭೆಗಳಿಗೆ ಹಾಜರಾಗುವಂತಿಲ್ಲ. ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳ ಮೇಲೆ ಆಯೋಗ ನಿಗಾ ವಹಿಸಲಿದೆ. ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಮಾದರಿಯಲ್ಲೇ ನಿಯಮಾವಳಿ ಈ ಉಪ ಚುನಾವಣೆಗೂ ಅನ್ವಯಿಸಲಿದೆ.

    ಸಹಾಯಕ ಚುನಾವಣಾಧಿಕಾರಿಗಳಾಗಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದರು. ಚುನಾವಣೆ ಸಂಬಂಧಿಸಿ ಚೆಕ್‌ಪೋಸ್ಟ್‌ಗಳು ಇರುವುದಿಲ್ಲ. ಪ್ರೈಯಿಂಗ್ 5 ಸ್ಕ್ಯಾಡ್, ವೀಡಿಯೋ ಸರ್ವೆಲೆನ್ಸ್ ತಂಡ ಕಾರ್ಯಾಚರಿಸಲಿದೆ. ರಾಜಕೀಯ ಪಕ್ಷಗಳ ಬ್ಯಾನರ್, ಬಂಟಿಂಗ್ಸ್ ಹೋರ್ಡಿಂಗ್ ಗಳನ್ನು ಕೂಡಲೇ ತೆರವುಗೊಳಿಸಲಾಗುವುದು ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 234 ಮತಗಟ್ಟೆಯಿದ್ದು, 3,551 ಮತದಾರರಿದ್ದಾರೆ. ಉಡುಪಿಯಲ್ಲಿ 158ಮತಗಟ್ಟೆಯಿದ್ದು, 2,486 ಮತದಾರರಿದ್ದಾರೆ. ಈ ಉಪ ಚುನಾವಣೆಯಲ್ಲಿ ದ.ಕ.ದಲ್ಲಿ ಗ್ರಾಮಪಂಚಾಯತಿ, ಮನಪಾ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ವಿಧಾನಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಸೇರಿ 234 ಸ್ಥಳೀಯ ಸಂಸ್ಥೆಗಳಲ್ಲಿ 3,551 ಮಂದಿ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ. ಉಡುಪಿಯಲ್ಲಿ 158 ಸ್ಥಳೀಯ ಸಂಸ್ಥೆಗಳಲ್ಲಿ 2,486 ಮಂದಿ ಮತ ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

    Post Views: 217

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.