Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ: 298 ಮಂದಿಯ ಡಿಎಲ್ ರದ್ದು
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ: 298 ಮಂದಿಯ ಡಿಎಲ್ ರದ್ದು

    August 22, 2023
    Share
    ಮಂಗಳೂರು: ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಆ. 6ರಿಂದ 20ರವರೆಗೆ ಸಂಚಾರ ಪೊಲೀಸರು ನಡೆಸಿದ ತಪಾಸಣೆಯ ಸಂದರ್ಭ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿ 298 ಮಂದಿ ಚಾಲಕ-ಸವಾರರ ಚಾಲನಾ ಪರವಾನಿಗೆ (ಡಿಎಲ್) ರದ್ದತಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್‌ಟಿಒ) ಶಿಫಾರಸು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಮಿತ ವೇಗ ಮತ್ತು ನಿರ್ಲಕ್ಷ್ಯದ 71, ಮದ್ಯಪಾನಗೈದ 20, ಗೂಡ್ಸ್ ವಾಹನಗಳಲ್ಲಿ ಜನರ ಸಾಗಾಟ 42, ವಾಹನ ಸಂಚಾರ/ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿರುವ 4, ಕೆಂಪು ದೀಪ ಉಲ್ಲಂಘಿಸಿದ 10, ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್‌ನ 7, ಹೆಲ್ಮೆಟ್ ಧರಿಸದ 128, ಸೀಟ್ ಬೆಲ್ಟ್ ಹಾಕದ 16 ಪ್ರಕರಣ ಹೀಗೆ ಒಟ್ಟು 298 ಪ್ರಕರಣಗಳಿಗೆ ಸಂಬಂಧಿಸಿದಂತೆ ಡಿಎಲ್ ಅಮಾನತಿಗೆ ಶಿಫಾರಸು ಮಾಡಲಾಗಿದೆ.ಇನ್ನು ಕಳೆದ 15 ದಿನಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ಪಾರ್ಕ್ ಮಾಡಲಾದ 593, ಕರ್ಕಶ ಹಾರ್ನ್ ಬಳಸುತ್ತಿದ್ದ 106, ಟಿಂಟ್ ಗ್ಲಾಸ್ ಹಾಕಿದ್ದ 70, ಏಕಮುಖ ಸಂಚಾರ ಮಾಡಿದ 28 ಹಾಗೂ ಹೆಚ್ಚು ಬಾಡಿಗೆ ಅಥವಾ ಸೂಚಿತ ಸ್ಥಳಕ್ಕೆ ಬರಲೊಪ್ಪದ 13 ರಿಕ್ಷಾ ಚಾಲಕರ ವಿರುದ್ಧ ಸಹಿತ 810 ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
    Post Views: 217

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.