ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಾರು ಬೆಂಕಿಗಾಹುತಿಯಾಗಿದೆ. ಕದ್ರಿ ಅಗ್ನಿಶಾಮಕದಳದವರು ಆಗಮಿಸಿ, ಬೆಂಕಿ ನಂದಿಸಿದ್ದಾರೆ.
Post Views: 132