Facebook Twitter Instagram
    Monday, October 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026
    Share

    ಮಂಗಳೂರು: ನಗರದ ಬೋಳಾರ ಮುಳಿಹಿತ್ತು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಪಿರ್ಯಾದಿದಾರರ ದೂರಿನ ಪ್ರಕಾರ, ರಾತ್ರಿ ಸುಮಾರು 8 ಗಂಟೆಗೆ ನೋವಾ ಎನ್‌ಕ್ಲೀವ್ ಬಿಲ್ಡಿಂಗ್ ಎದುರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಪರಿಚಿತನಾದ ಮೊಹಮ್ಮದ್ ಯಾಸೀನ್ ಅಹಮದ್ ಎಂಬಾತ ಅಡ್ಡಗಟ್ಟಿ ತಡೆದು ನಿಲ್ಲಿಸಿದ್ದಾನೆ. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, “ನಿನ್ನನ್ನು ಕೊಂದು ಹಾಕಿ ಮನೆಗೆ ಹೋಗುತ್ತೇನೆ” ಎಂದು ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

    ಇದಕ್ಕೂ ಮೊದಲು ಮಧ್ಯಾಹ್ನ 12.01ರ ಸುಮಾರಿಗೆ ಇದೇ ರಸ್ತೆಯಲ್ಲಿ ಘಟನೆ ನಡೆದಿರುವುದಾಗಿ ಪಿರ್ಯಾದಿಯಲ್ಲಿ ಉಲ್ಲೇಖಿಸಲಾಗಿದೆ. ಯಾಸೀನ್ ಅಹಮದ್ ತನ್ನ ಬಿಳಿ ಬಣ್ಣದ ಮಾರುತಿ ಡಿಸೈರ್ (KA-19-AC-0569) ಕಾರನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಎಂದು ಆರೋಪಿಸಲಾಗಿದೆ.

    ಕಾರನ್ನು ತೆರವುಗೊಳಿಸುವಂತೆ ಕೇಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಕೆನ್ನೆಗೆ ಹೊಡೆದು, ಹೊಟ್ಟೆಗೆ ಮುಷ್ಟಿಯಿಂದ ಗುದ್ದಿ, ದ್ವಿಚಕ್ರ ವಾಹನವನ್ನು ಕೆಳಗೆ ಬೀಳಿಸಿ ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದಾನೆ ಎಂದು ಪಿರ್ಯಾದಿದಾರರು ಆರೋಪಿಸಿದ್ದಾರೆ.

    ಹಲ್ಲೆಯಿಂದ ಬೆನ್ನು ಹಾಗೂ ಸೊಂಟಕ್ಕೆ ನೋವುಂಟಾಗಿದ್ದು, ಮೊಹಮ್ಮದ್ ಸಫಾನ್ ಎಂಬವರು ಚಿಕಿತ್ಸೆಗೆ ವೆನ್ಲಕ್ ಆಸ್ಪತ್ರೆಗೆ ಕರೆದೊಯ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 12

    Related Posts

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮನೆಯ ಬಾಗಿಲು ಮುರಿದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

    October 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.