Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು

    December 16, 2024
    Share

    ಉಡುಪಿ: ಒಬ್ಟಾಕೆ ಜತೆ ನಿಶ್ಚಿತಾರ್ಥ ಮಾಡಿಕೊಂಡು ಅದನ್ನು ಬಚ್ಚಿಟ್ಟು ಮತ್ತೋರ್ವಳನ್ನು ವಿವಾಹವಾಗಿ ಬಳಿಕ ನಿಶ್ಚಿತಾರ್ಥವಾದ ಯುವತಿಯನ್ನು ಮದುವೆ ಮಾಡಿಕೊಂಡು ಆಕೆಗೆ ದೈಹಿಕ, ಮಾನಸಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ ಇತರ ಐವರ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನವರಾಜ್‌ 2024ರ ಜೂ. 23ರಂದು ಬ್ರಹ್ಮಾವರದ ಹಂದಾಡಿಯ ಚೈತ್ರಾ (36) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಈ ವಿಚಾರ ಬಚ್ಚಿಟ್ಟು 2024ರ ಜುಲೈ 29ರಂದು ನಂದಿನಿ ಎನ್ನುವಾಕೆಯನ್ನು ವಿವಾಹವಾಗಿದ್ದ. 2024ರ ಸೆ. 5ರಂದು ಬ್ರಹ್ಮಾವರ ಮದರ್‌ ಪ್ಯಾಲೆಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಚೈತ್ರಾಳನ್ನು ಮದುವೆಯಾಗಿದ್ದ.

    ಮದುವೆ ಮುಗಿದ ಬಳಿಕ ಚೈತ್ರಾಳನ್ನು ಆತನ (ನವರಾಜ್‌) ಮನೆಯಾದ ಚಿಕ್ಕಮಗಳೂರು ಜಿಲ್ಲೆಯ ಲಕ್ಯ ಹೋಬಳಿ, ಸಿಂಧಿಗೆರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಚೈತ್ರಾಳಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಇತರರಾದ ಜಯಣ್ಣ ಎಸ್‌.ಡಿ., ಸುಂದರಮ್ಮ, ಅಮೃತಾ, ಪವಿತ್ರಾ ಅವರೊಂದಿಗೆ ಸೇರಿ ಆಕೆಗೆ ನೆರೆಕೆರೆಯವರೊಂದಿಗೆ ಮಾತನಾಡದಂತೆ ನಿರ್ಬಂಧಿಸಿ ಮನೆಯೊಳಗೆ ಕೂಡಿ ಹಾಕಿದ್ದ. ಅವರೆಲ್ಲರೂ ಸೇರಿ 2 ಲಕ್ಷ ರೂ.ಹಣಕ್ಕೆ ಬೇಡಿಕೆ ಇಟ್ಟು ಹಲ್ಲೆ ನಡೆಸಿ ಹಿಂಸೆ ನೀಡಿದ್ದಾರೆ. ನಂದಿನಿಯನ್ನು ಮದುವೆಯಾದ ಬಗ್ಗೆ ಯಾರಿಗಾದರೂ ಹೇಳಿದಲ್ಲಿಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಪತಿಯ ಸ್ನೇಹಿತನಾದ ಕಿರಣ್‌ಗೆ ನವರಾಜ್‌ ಮದುವೆಯಾದ ವಿಚಾರ ಗೊತ್ತಿದ್ದರೂ, ಆತ ಸತ್ಯ ಬಚ್ಚಿಟ್ಟು ನಂದಿನಿಯ ಜತೆ ಮದುವೆ ಮಾಡಿಸಿ, ಮದುವೆಗೆ ಸಹಕರಿಸಿ ಮೋಸ ಮಾಡಿದ್ದಾಗಿಯೂ ದೂರು ದಾಖಲಾಗಿದೆ.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.