Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026
    Share

    ಯುವತಿಗೆ ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಯುವಕನ ಪೋಷಕರು ಮತ್ತು ಸಹೋದರಿಯನ್ನು ವಿಚಾರಣೆಗೆ ಒಳಪಡಿಸುವುದು ಕಾನೂನಿನ ದುರುಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಿದೆ.

    ಯುವಕನೊಬ್ಬ ಯುವತಿಯೊಂದಿಗೆ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿ ನಂಬಿಕೆ ದ್ರೋಹ ಎಸಗಿದ್ದನೆಂಬ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಯುವಕನ ತಂದೆ, ತಾಯಿ ಹಾಗೂ ಸಹೋದರಿಯನ್ನೂ ಆರೋಪಿಗಳನ್ನಾಗಿ ಸೇರಿಸಿ ದೂರು ನೀಡಲಾಗಿತ್ತು. ತಮ್ಮ ಮೇಲಿನ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಈ ಆದೇಶ ನೀಡಿದೆ.

    ಮಗ ಹಾಗೂ ದೂರುದಾರೆ ಯುವತಿಯ ನಡುವಿನ ವೈಯಕ್ತಿಕ ಸಂಬಂಧ ಮತ್ತು ನೀಡಲಾದ ಭರವಸೆಗಳಿಗೆ ಪೋಷಕರು ಅಥವಾ ಸಹೋದರಿಯನ್ನು ಅಪರಾಧಕ್ಕೆ ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 69ರ ಅಡಿಯಲ್ಲಿ ಬರುವ ಮದುವೆ ಭರವಸೆಯ ವಂಚನೆಯ ಅಪರಾಧವು ಕೇವಲ ಆ ಕೃತ್ಯ ಎಸಗಿದ ಯುವಕನಿಗೆ ಮಾತ್ರ ಅನ್ವಯಿಸುತ್ತದೆ. ಉಳಿದಂತೆ ಜೀವ ಬೆದರಿಕೆ ಹಾಗೂ ಅವಮಾನಿಸಿದ ಆರೋಪಗಳಿಗೂ ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ, ಕುಟುಂಬದವರ ವಿರುದ್ಧದ ತನಿಖೆಯನ್ನು ಮುಂದುವರಿಸುವುದು ಸೂಕ್ತವಲ್ಲ ಎಂದು ಪೀಠ ತಿಳಿಸಿದೆ.

    ಆದಾಗ್ಯೂ, ಪ್ರಕರಣದ ಮೊದಲನೇ ಆರೋಪಿಯಾಗಿರುವ ಯುವಕನ ವಿರುದ್ಧದ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯನ್ನು ಕಾಯ್ದಿರಿಸಲಾಗಿದ್ದು, ಆತನ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.

    Post Views: 1

    Related Posts

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.