Facebook Twitter Instagram
    Wednesday, November 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ- ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ- ಮೂವರು ಆರೋಪಿಗಳ ಬಂಧನ

    November 18, 2026
    Share

    ಬಂಟ್ವಾಳ: ಮಾರಕಾಸ್ತ್ರ ತೋರಿಸಿ  ಬೆದರಿಸಿ ಹಣ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮಂಗಳೂರು ಶಕ್ತಿನಗರದ ಪ್ರವಿತ್ ಶೆಟ್ಟಿ, ಉಳ್ಳಾಲ ಕೋಡಿಯ ಉಮ್ಮರ್ ಫಾರೂಕ್ ಹಾಗೂ ಉಳ್ಳಾಲ ಹರೇಕಳದ ಶಾಕೀರ್ ಬಂಧಿತ ಆರೋಪಿಗಳು.

    ಮಂಗಳೂರಿನ ಕಣ್ಣೂರಿನ ಸಿಮೆಂಟ್ ಮತ್ತು ಕಬ್ಬಿಣದ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಯ್ಯದಿ ಎಂಬವರು, ಕಳೆದ ಆಗಸ್ಟ್ 20ರಂದು ಅಂಗಡಿಗಳಿಂದ ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ ಬಂಟ್ವಾಳದ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ತಲವಾರು ತೋರಿಸಿ ಬೆದರಿಸಿ, ಅವರ ಬಳಿಯಿದ್ದ 8 ಲಕ್ಷದ 35 ಸಾವಿರ ರೂಪಾಯಿ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

    ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಮೂವರನ್ನು ನವೆಂಬರ್ 11ರಂದು ಬಂಧಿಸಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ನಿರೀಕ್ಷಕ ಸೀತಾರಾಮ ಪಿ. ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿ ಬಂಧಿತ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ 2 ಲಕ್ಷದ 1 ಸಾವಿರ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿತ ಪ್ರವಿತ್‌ ರಾಜ್ ಶೆಟ್ಟಿ ಎಂಬಾತನ ಗುರುತು ಪತ್ತೆ ಪರೇಡ್ ನಡೆಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 7

    Related Posts

    ಮಂಗಳೂರು: ಬೈಕಂಪಾಡಿಯ ಬೋಲಾಸ್‌ ಘಟಕದಿಂದ 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ

    November 18, 2026

    ಬಂಟ್ವಾಳ: ಸಿಸಿಟಿವಿ ಸುಳಿವಿಲ್ಲದ ದರೋಡೆ ಪ್ರಕರಣಕ್ಕೆ ಪೊಲೀಸರ ಬ್ರೇಕ್- ಮೂವರು ಅರೆಸ್ಟ್!!

    November 18, 2026

    ಮಂಗಳೂರು: ಮೊಟ್ಟೆ ಸಾಗಾಟದ ವಾಹನದಲ್ಲಿ 16 ಜಾನುವಾರುಗಳ ಅಕ್ರಮ ಸಾಗಣೆ – ಇಬ್ಬರ ಬಂಧನ

    November 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬೈಕಂಪಾಡಿಯ ಬೋಲಾಸ್‌ ಘಟಕದಿಂದ 1,240 ಕೆ.ಜಿ. ನಕಲಿ ಅಡುಗೆ ಎಣ್ಣೆ ಜಪ್ತಿ

    November 18, 2026

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ- ಮೂವರು ಆರೋಪಿಗಳ ಬಂಧನ

    November 18, 2026

    ಬಂಟ್ವಾಳ: ಸಿಸಿಟಿವಿ ಸುಳಿವಿಲ್ಲದ ದರೋಡೆ ಪ್ರಕರಣಕ್ಕೆ ಪೊಲೀಸರ ಬ್ರೇಕ್- ಮೂವರು ಅರೆಸ್ಟ್!!

    November 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.