Facebook Twitter Instagram
    Thursday, October 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026
    Share

    ಬೆಳ್ತಂಗಡಿ: ತಾಲೂಕಿನ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ನಾವೂರು ನಿವಾಸಿ ರವಿ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವೂರು ನಿವಾಸಿ ಸುರೇಶ್ ಇಂಚರ ಅವರನ್ನು ಅಕ್ಟೋಬರ್ 14ರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಪುತ್ತೂರಿನ ಕೌಡಿಚಾರು ಪ್ರದೇಶದಲ್ಲಿದ್ದ ದಿನೇಶ್ ಪ್ರಭು ನಾವೂರು ಎಂಬವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.

    ತಡರಾತ್ರಿ ಕ್ಲಿನಿಕ್‌ಗೆ ಬೆಂಕಿ:

    ಅಕ್ಟೋಬರ್ 7ರಂದು ತಡರಾತ್ರಿ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಘಟನೆಯಿಂದ ಕ್ಲಿನಿಕ್‌ನಲ್ಲಿದ್ದ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸುಮಾರು 2ರಿಂದ 3 ಲಕ್ಷ ರೂ. ನಷ್ಟ ಸಂಭವಿಸಿತ್ತು. ಘಟನೆಯು ಬೆಳ್ತಂಗಡಿ ತಾಲೂಕಿನಲ್ಲಿ ತೀವ್ರ ಆತಂಕ ಮೂಡಿಸಿತ್ತು.

    ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 326 ಮತ್ತು 324ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ಘಟನೆಯ ಹಿಂದೆ ಇರುವವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು

    ಆರೋಪಿಗಳ ಬಂಧನಕ್ಕೆ ವ್ಯಾಪಕ ಒತ್ತಾಯ:

    ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಘಟನೆಯನ್ನು ತಾಲೂಕಿನಾದ್ಯಂತ ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದರು. ಶಾಸಕ ಹರೀಶ್ ಪೂಂಜ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಉದ್ಯಮಿಗಳು, ವೈದ್ಯರು ಹಾಗೂ ಸಾರ್ವಜನಿಕರು ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

    ನಾವೂರು ಗ್ರಾಮಸ್ಥರು ಘಟನೆಯನ್ನು ಖಂಡಿಸಿ ಸಭೆ ನಡೆಸಿ, ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ವಿವಿಧ ಸಂಘಟನೆಗಳೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದವು.

    ಹಿನ್ನೆಲೆಯಲ್ಲಿ ತನಿಖೆಯನ್ನು ತೀವ್ರಗೊಳಿಸಿದ ಬೆಳ್ತಂಗಡಿ ಪೊಲೀಸರು, ಘಟನೆ ನಡೆದ ಒಂದು ವಾರದೊಳಗೆ ಆರೋಪಿಯನ್ನು ಬಂಧಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಶಂಕಿತರನ್ನೂ ವಿಚಾರಣೆಗೊಳಪಡಿಸಿದ್ದಾರೆ.

    ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ

    ಘಟನೆ ನಡೆದ ಬಳಿಕ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಹಾಗೂ ಪೊಲೀಸ್ ಮತ್ತು ಸೋಕೋ ತಂಡದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಡಿವೈಎಸ್‌ಪಿ ರೋಹಿಣಿ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಆನಂದ್ ಮತ್ತು ಸಿಖಂದರ್ ಪಾಷಾ ಸೇರಿದಂತೆ ಪೊಲೀಸ್ ತಂಡವು ತನಿಖೆ ಹಾಗೂ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

    ವೈದ್ಯಕೀಯ ಸೇವೆ ನೀಡುವ ಕ್ಲಿನಿಕ್‌ನ್ನೇ ಗುರಿಯಾಗಿಸಿಕೊಂಡು ನಡೆದಿದ್ದ ಈ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಓರ್ವನ ಬಂಧನ ಹಾಗೂ ಇತರ ಶಂಕಿತರ ವಿಚಾರಣೆಯಿಂದ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ

    Post Views: 9

    Related Posts

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026

    ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ- ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

    October 15, 2026

    ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ನಿಜ- ಮಾಜಿ ಶಾಸಕ ಕೆ. ರಘುಪತಿ ಭಟ್

    October 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026

    ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ- ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

    October 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.