Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜಾನುವಾರು ಚರ್ಮರೋಗ: ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ
    ಇತ್ತೀಚಿನ ಸುದ್ದಿ

    ಜಾನುವಾರು ಚರ್ಮರೋಗ: ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ

    October 14, 2022
    Share

    ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

    ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು

    ಬಹುತೇಕ ಗುಣಮುಖವಾಗಿವೆ. ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

    ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

    ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು, 20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

    Post Views: 271

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.