ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ.
ಅರೋಪಿಗಳಿಂದ ಸುಮಾರು 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಿಂದ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5 ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ವಶಕ್ಕೆ ಪಡೆದಿದ್ದಾರೆ.
ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ.
ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ , ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.