Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಗ್ರರ ಮೊಬೈಲ್ ರಿಟ್ರೖವ್​ಗೆ ರವಾನೆ: ಗ್ರೆನೇಡ್ ಸಿಕ್ರೇಟ್ ಹಿಂದೆ ಬಿದ್ದ ಸಿಸಿಬಿ ಪೊಲೀಸರು
    ಇತ್ತೀಚಿನ ಸುದ್ದಿ

    ಉಗ್ರರ ಮೊಬೈಲ್ ರಿಟ್ರೖವ್​ಗೆ ರವಾನೆ: ಗ್ರೆನೇಡ್ ಸಿಕ್ರೇಟ್ ಹಿಂದೆ ಬಿದ್ದ ಸಿಸಿಬಿ ಪೊಲೀಸರು

    July 23, 2023
    Share

    ಬೆಂಗಳೂರು: ನಗರದಲ್ಲಿ ಭಾರಿ ಬಾಂಬ್ ಸ್ಪೋಟಕ್ಕೆ ಸಂಚು ರೂಪಿಸಿ ಸಿಕ್ಕಿಬಿದ್ದಿರುವ ಐವರು ಶಂಕಿತ ಉಗ್ರರಿಂದ ವಶಕ್ಕೆ ಪಡೆಯಲಾಗಿರುವ 4 ಜೀವಂತ ಗ್ರೆನೇಡ್​ಗಳ ಹಿಂದಿನ ರಹಸ್ಯ ಭೇದಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

    ಗ್ರೆನೇಡ್​ಗಳು ಎಲ್ಲಿ ಬಂದವು, ಶಂಕಿತರಿಗೆ ತಲುಪಿಸಿದ್ದು ಯಾರು, ಎಲ್ಲೆಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರೆಂಬ ಪ್ರಶ್ನೆಗಳಿಗೆ ಉತ್ತರ ಹುಡುಕಲು ಸಿದ್ಧತೆ ನಡೆಸಿದ್ದು, ನ್ಯಾಯಾಲಯದ ಅನುಮತಿ ಪಡೆದ ಬಳಿಕ ವಿಧಿ ವಿಜ್ಞಾನ ಪ್ರಯೋಗಾಲಯ, ರಾಷ್ಟ್ರೀಯ ಬಾಂಬ್ ಡೇಟಾ ಸೆಂಟರ್​ಗಳು ) ಪರಿಶೀಲನೆ ಆರಂಭಿಸಲಿವೆ.

    ಮೊದಲಿಗೆ ಗ್ರೆನೇಡ್​ಗಳನ್ನು ನಿಷ್ಕ್ರಿಯಗೊಳಿಸುವ ಕೆಲಸ ಮಾಡಲಾಗುತ್ತಿದ್ದು, ಅವುಗಳ ತಯಾರಿಕೆಗೆ ಬಳಕೆಯಾಗಿರುವ ಕಚ್ಚಾ ವಸ್ತುಗಳ ವಿಂಗಡಣೆ ಮಾಡಲಾಗುತ್ತದೆ. ಬಳಿಕ ಪ್ರತಿಯೊಂದು ಕಚ್ಚಾವಸ್ತು ಎಲ್ಲಿ ತಯಾರಾಗಿರಬಹುದು? ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಗ್ರೆನೇಡ್ ಮಾದರಿಯನ್ನು ಬಳಿಕ ಎನ್.ಬಿ.ಡಿ.ಸಿ ಡಾಟಾಗಳ ಜತೆಗೆ ಅನಾಲಿಸಿಸ್ ಮಾಡಲಾಗುತ್ತದೆ.

    ದೇಶದಲ್ಲಿ ಸಂಭವಿಸುವ ಪ್ರತೀ ಸ್ಪೋಟಗಳ ಡಾಟಾ ನಿರ್ವಹಣೆ ಮಾಡುವ ಎನ್​ಬಿಡಿಸಿ ಈ ಮಾದರಿಯ ಗ್ರೆನೇಡ್ ಎಲ್ಲಿಯಾದರೂ ಬಳಕೆಯಾಗಿದೆಯಾ ಎಂಬುದರ ಕುರಿತು ಕೂಲಂಕಷವಾಗಿ ಪರಿಶೀಲಿಸುತ್ತದೆ. ಸ್ಫೋಟ ಮತ್ತು ಅದರ ಪರಿಣಾಮವೇನು ಎಂಬ ಮಾಹಿತಿ ಲಭ್ಯವಾಗಲಿದೆ ಎಂದು ಸಿಸಿಬಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
    ಶಂಕಿತ ಉಗ್ರರ ಮೊಬೈಲ್​ನಲ್ಲಿ ವಾಟ್ಸ್​ಆಪ್ ಚಾಟಿಂಗ್ ಮತ್ತು ಕರೆಗಳು ಪತ್ತೆಯಾಗಿದ್ದು, ಶಂಕಿತರು ವಾಟ್ಸ್​ಆಪ್ ಮೂಲಕ ಹಲವರಿಗೆ ಕರೆ ಮಾಡಿದ್ದಾರೆ, ಜತೆಗೆ ಚಾಟಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ.

    ಕೆಲವರ ಬಳಿ ಆಂಡ್ರಾಯ್ಡ್ ಮೊಬೈಲ್ ಇದ್ದರೆ ಇನ್ನೂ ಕೆಲವರ ಬಳಿ ಬೆಸಿಕ್ ಮೊಬೈಲ್​ಗಳಿವೆ. ಸದ್ಯ ಶಂಕಿತರ ಬಳಿಯಿದ್ದ 12 ಮೊಬೈಲ್ ಫೋನ್ ರಿಟ್ರೀವ್ ಮಾಡಲು ಸಿಸಿಬಿ ಕಳಿಸಿದೆ

    ವಿದೇಶಕ್ಕೆ ಪರಾರಿಯಾಗಿರುವ ಶಂಕಿತ ಉಗ್ರ ಜುನೈದ್ ಬಂಧನಕ್ಕಾಗಿ ಇಂಟರ್ ಪೋಲ್ ನೆರವು ಪಡೆಯಲು ಸಿಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಕಂಡು ಬಂದಿದೆ.

    Post Views: 254

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.