Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

    November 7, 2025
    Share

    ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ.

    ನ.4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಬ್ದುಲ್ ಸಲಾಮ್ ಪ್ರಾಯ 39 ವರ್ಷ ತಂದೆ; ಅಬ್ದುಲ್ ಹಮೀದ್ ವಾಸ; ಎಸ್.ಹೆಚ್. ನಗರ, ದಯಾಂಬು, ಅಡ್ಯಾರ್, ಕಣ್ಣೂರು, ಮಂಗಳೂರು. ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ನ.6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು, ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ, ಪ್ರಾಯ: 28 ವರ್ಷ, ತಂದೆ: ದಿ.ಅಬ್ದುಲ್ ರೆಹಮಾನ್, ವಾಸ: #1-10-1, ಜಾರದಗುಡ್ಡೆ ಹೌಸ್, ಬೋಳಿಯಾರು, ಉಳ್ಳಾಲ ತಾಲೂಕು, ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ವಶದಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ ಬೈಕ್, ಮೊಬೈಲ್ ಪೋನ್, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

    ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

    Post Views: 113

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.