Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚೆಕ್ ಬೌನ್ಸ್ ಕೇಸ್, ಶಾಲಾ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚೆಕ್ ಬೌನ್ಸ್ ಕೇಸ್, ಶಾಲಾ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ

    November 14, 2025
    Share

    ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. 

    ಬಂಟ್ವಾಳದ ಕಾವಳಕಟ್ಟೆಯಲ್ಲಿರುವ ಕಲೈ ಚಂದ್ರಮೌಳಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಸ್. ನಾಯಕ್ ಅವರು ಶಿಕ್ಷೆಗೊಳಗಾದವರು.  ಮಂಗಳೂರಿನ ದಿವ್ಯಶ್ರೀ ಡಿ.ಕೆ. ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕೊಡಿಯಾಲ್‌ಬೈಲ್ ಶಾಖೆಯಿಂದ ಸಾಲ ಪಡೆದಿದ್ದರು.

    ಈ ಸಾಲಕ್ಕೆ ಚಂದ್ರಶೇಖರ್ ಎಸ್. ನಾಯಕ್ ಜಾಮೀನುದಾರರಾಗಿದ್ದರು. ದಿವ್ಯಶ್ರೀ ಪಡೆದ ಸಾಲವನ್ನು ಸಕಾಲಕ್ಕೆ ತೀರಿಸದೆ ಸುಸ್ತಿಯಾಗಿತ್ತು. ಈ ಬಗ್ಗೆ ಸಾಲ ವಸೂಲಾತಿಗಾಗಿ ಸಹಕಾರಿ ಕಾಯ್ದೆಯನ್ವಯ ಬ್ಯಾಂಕ್ ಕಾನೂನು ಪ್ರಕ್ರಿಯೆಯನ್ನು ಜರುಗಿಸಲಾಗಿತ್ತು. ಈ ಮಧ್ಯೆ, ಬ್ಯಾಂಕ್‌ನ್ನು ಸಂಪರ್ಕಿಸಿದ ಕಾವಳಕಟ್ಟೆ ಶಾಲೆಯ ಹೆಡ್ ಮಾಸ್ಟರ್ ಚಂದ್ರಶೇಖರ್ ನಾಯಕ್ ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದರು.

    ಈ ಚೆಕ್ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಚಂದ್ರಶೇಖರ್ ನಾಯಕ್ ವಿರುದ್ಧ ಬ್ಯಾಂಕ್ ಕಾನೂನು ಪ್ರಕ್ರಿಯೆ ಆರಂಭಿಸಿತ್ತು.  ಬ್ಯಾಂಕ್ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಪೂರೈಸಿದ ಬಳಿಕ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಿತ್ತು. ಬ್ಯಾಂಕಿನ ಪರವಾಗಿ 18 ದಾಖಲೆಗಳನ್ನು ಹಾಜರುಪಡಿಸಲಾಗಿತ್ತು. ಮೌಖಿಕ ಸಾಕ್ಷಿ ಮತ್ತು ದಾಖಲೆಗಳನ್ನು ಪರಿಶೀಲಿಸಿದ 9ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಡಾ. ಶಿಲ್ಪಾ ಬ್ಯಾಡಗಿ ಅವರು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ರೂ. 2.42 ಲಕ್ಷ ದಂಡ ಹಾಗೂ ಒಂದು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

    ಬ್ಯಾಂಕಿನ ಪರವಾಗಿ ಮಂಗಳೂರಿನ ನ್ಯಾಯವಾದಿ ಸುಕೇಶ್ ಕುಮಾರ್ ಶೆಟ್ಟಿ ಅವರು ವಾದ ಮಂಡಿಸಿದ್ದರು.  ಹೆಡ್ ಮಾಸ್ಟರ್ ಅವರ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನಿಂದ ಸರ್ಕಾರಿ ನೌಕರಿಯಲ್ಲಿ ಇರುವ ಚಂದ್ರಶೇಖರ್ ನಾಯಕ್ ಅವರು ತಮ್ಮ ಸರ್ಕಾರಿ ನೌಕರಿ ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದ್ದಾರೆ.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.