ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿ ಖಾಸಗಿ ಬಸ್ನಡಿಗೆ ಮಗುವೊಂದು ಬಿದ್ದು ಸಾವನ್ನಪ್ಪಿ, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.
ಮೃತಪಟ್ಟ ಮಗುವನ್ನು ಹಾರ್ದಿಕ್(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್ ಬಸ್ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ಬಸ್ನ ಚಕ್ರದಡಿಗೆ ಮಗು ಸಿಲುಕಿ ಮೃತಪಟ್ಟಿದೆ. ಘಟನೆಯಲ್ಲಿ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮಂಗಳೂರು ನಗರ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.