Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮಗು ಮಾರಾಟ : ಪ್ರಕರಣ ದಾಖಲು…!!
    ಇತ್ತೀಚಿನ ಸುದ್ದಿ

    ಉಡುಪಿ: ಮಗು ಮಾರಾಟ : ಪ್ರಕರಣ ದಾಖಲು…!!

    August 10, 2024
    Share

    ಉಡುಪಿ: ನಗರದಲ್ಲಿ ಮಗು ಮಾರಾಟ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

    ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್‌ ಸಯ್ಯದ್‌ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು.

    ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್‌ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್‌ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.

    ವಿಚಾರಣೆ ವೇಳೆ ಆರೋಪಿಗಳು ಮಗುವನ್ನು ಮೂಲ್ಕಿಯ ನಿವಾಸಿ ವಾಜಿದ್‌ ಅವರಿಗೆ ಕಾನೂನು ಬಾಹಿರವಾಗಿ ನೀಡಿರುವುದಾಗಿ ತಿಳಿಸಿದ್ದರು. ಬಳಿಕ ಮಹಿಳಾ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ವಾಜಿದ್‌ನ ಬಗ್ಗೆ ವಿಚಾರಣೆ ಮಾಡಿ ಆತನನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಆತ ಮಗುವಿನೊಂದಿಗೆ ಬಂದಿದ್ದು, ಮಗುವಿನ ಮಾರಾಟದ ಬಗ್ಗೆ ಸತ್ಯಾಸತ್ಯತೆ ತಿಳಿಯದೇ ಇದ್ದುದರಿಂದ ಪ್ರಕರಣ ದಾಖಲಿಸಲು ಸಾಧ್ಯವಾಗಿರಲಿಲ್ಲ.

    ಪ್ರಸ್ತುತ ಸುರಕ್ಷಾ ಅವರ ದೂರಿನಂತೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲ ನ್ಯಾಯ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಪ್ರಸ್ತುತ ತಾಯಿ-ಮಗುವನ್ನು ಸುರಕ್ಷತೆಯ ದೃಷ್ಟಿಯಿಂದ ಉಡುಪಿಯ ಸಖೀ ಒನ್‌ ಸ್ಟಾಪ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

    Post Views: 216

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.