Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!
    ಇತ್ತೀಚಿನ ಸುದ್ದಿ

    ಕಾಸರಗೋಡು: ಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!

    February 10, 2026
    Share

    ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು ಎಂದೇ ಪರಿಚಿತಳಾಗಿದ್ದ ರೇಶ್ಮಾ (24) ಅವರು ಕಾಸರಗೋಡು ನಗರದ ಹೊರವಲಯ ಉಳಿಯತ್ತಡ್ಕದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ರೇಶ್ಮಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.

    ಕಾಸರಗೋಡು ಭಾಷೆಯಲ್ಲಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಪಡೆದಿದ್ದ ಚಿನ್ನು ಪಾಪು ಅವರಿಗೆ ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಅವರು ಈ ಹಿಂದೆ ವಿವಾಹಿತರಾಗಿದ್ದು, ಒಂದು ಮಗುವಿನ ತಾಯಿಯಾಗಿದ್ದರು. ಪತಿಯಿಂದ ವಿಚ್ಛೇದನಗೊಂಡ ಬಳಿಕ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

    ಈ ಘಟನೆ ಸಂಬಂಧ ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ರೇಶ್ಮಾಳ ಮೊಬೈಲ್ ಫೋನ್ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ

    Post Views: 118

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.