Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ಚಿಟ್‌ ಫಂಡ್ ವ್ಯವಹಾರ, ವ್ಯಕ್ತಿಗೆ 10 ಲಕ್ಷ ರೂಪಾಯಿ ಪಂಗನಾಮ-ದೂರು ದಾಖಲು
    ಇತ್ತೀಚಿನ ಸುದ್ದಿ

    ಸುರತ್ಕಲ್: ಚಿಟ್‌ ಫಂಡ್ ವ್ಯವಹಾರ, ವ್ಯಕ್ತಿಗೆ 10 ಲಕ್ಷ ರೂಪಾಯಿ ಪಂಗನಾಮ-ದೂರು ದಾಖಲು

    September 27, 2022
    Share

    ಸುರತ್ಕಲ್: ಚಿಟ್‌ ಫಂಡ್ ವ್ಯವಹಾರದಲ್ಲಿ ವಂಚನೆ ಮಾಡಿರುವ ಘಟನೆ ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದಲ್ಲಿ  ಬೆಳಕಿಗೆ ಬಂದಿದೆ.

    ಫೈನಾನ್ಸ್ ಮೂಲಕ ಚಿಟ್‌ ಫಂಡ್ ವ್ಯವಹಾರ ನಡೆಸುತ್ತಿದ್ದ ಅಶೋಕ್ ಭಟ್, ವಿದ್ಯಾ ಹಾಗೂ ಪ್ರಿಯಾಂಕ ಭಟ್ ಎಂಬವರು ತನಗೆ 10 ಲಕ್ಷ ರೂಪಾಯಿಯನ್ನು ನೀಡದೇ ವಂಚಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಆರೋಪಿಗಳ ಫೈನಾನ್ಸ್‌ ನಲ್ಲಿ ನಾನು 10 ಲಕ್ಷ ರೂಪಾಯಿ ಮೌಲ್ಯದ ಚಿಟ್‌ ಫಂಡ್‌ ಗೆ ಸೇರಿದ್ದು, 2019ರ ಸೆಪ್ಟೆಂಬರ್‌ ನಿಂದ ಪ್ರತೀ ತಿಂಗಳು 50 ಸಾವಿರ ರೂಪಾಯಿ ಚಿಟ್‌ ಫಂಡ್‌ ಗೆ ಪಾವತಿಸಲು ತಿಳಿಸಿದ್ದರು.

    ಅದಕ್ಕೆ ಒಪ್ಪಿದ ಬಳಿಕ ಆರೋಪಿತರು ಪ್ರತಿದಿನ 1,500 ರೂಪಾಯಿಯನ್ನು ನನ್ನಿಂದ ಪಡೆದುಕೊಂಡು ಹೋಗುತ್ತಿದ್ದರು. ತಿಂಗಳಿಗೊಮ್ಮೆ ಕಚೇರಿಗೆ ಹೋಗಿ ವ್ಯಹಾರದ ಪಾಸ್ ಪುಸ್ತಕದಲ್ಲಿ ಹಣ ಕಟ್ಟಿರುವ ಬಗ್ಗೆ ನಮೂದಿಸಿ ಸಹಿ ಪಡೆದುಕೊಂಡು ಬರುತ್ತಿದ್ದೆ.

    2021ರ ಮಾರ್ಚ್ 28ರಂದು ಫಂಡ್ ಮುಕ್ತಾಯವಾಗಿದ್ದು, ನಂತರದ ದಿನಗಳಲ್ಲಿ ಹಣ ಪಾವತಿಸುವುದಾಗಿ ಫೈನಾನ್ಸ್ ಮಾಲಕರು ತಿಳಿಸಿದ್ದರು. ಆದರೆ  ಒಂದಲ್ಲಾ ಒಂದು ಕಾರಣ ನೀಡಿ ಹಣ ಕೊಡದೆ ತಪ್ಪಿಸಿಕೊಂಡಿದ್ದಾರೆ. ನನಗೆ ಮಾತ್ರವಲ್ಲದೆ ಇತರರಿಗೂ ಸಹಿತ ಸುಮಾರು 2 ಕೋಟಿ ರೂಪಾಯಿನಷ್ಟು ಹಣ ನೀಡದೆ ವಂಚಿಸಿದ್ದಾರೆ ಎಂದು ಅವರು ಪೊಲೀಸ್ ದೂರಿನಲ್ಲಿ ವಿವರಿಸಿದ್ದಾರೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.