Facebook Twitter Instagram
    Friday, July 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026
    Share

    ಮಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ವಿಲೇಜ್ ವಾಸ್ತವ್ಯವಿದ್ದ ಚುಂಕಿ ಆಕಾಶಭವನ ಯಾನೆ ಸಂತೋಷ್ ಎಸ್. (34) ಎಂದು ತಿಳಿದು ಬಂದಿದೆ.

    2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾ‌ರ್ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬವರ ನಡುವೆ ಮಾತಿನ ಚಕಮಕಿ ನಡೆದಿತ್ತು.

    ಈ ಸಂದರ್ಭ ಚುಂಕಿ ಆಕಾಶಭವನ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ ಯಾನೆ ನರೇಶ್ ಮತ್ತು ಜಗ್ಗು ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಮೇಲೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದರು.

    ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಪ್ರಕರಣ ದಾಖಲಾದ ದಿನದಿಂದ ತಲೆಮರೆಸಿಕೊಂಡಿದ್ದನು. ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್ಪಿಸಿ (LPC) ವಾರಂಟ್ ಹೊರಡಿಸಿತ್ತು ಎಂದು ತಿಳಿದು ಬಂದಿದೆ.

    ಯಾವುದೇ ಸುಳಿವು ಇಲ್ಲದ ಈತನ ಕುರಿತು ಬಹಳ ಸಮಯದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸಿಸಿಬಿ ಪೊಲೀಸರಿಗೆ ಈತನು ಶಿವಮೊಗ್ಗದಲ್ಲಿ ಇದ್ದಾನೆಂದು ಖಚಿತ ಮಾಹಿತಿ ಲಭಿಸಿತ್ತು.

    ಈ ಹಿನ್ನೆಲೆಯಲ್ಲಿ ಜು.29ರಂದು ಈತನನ್ನು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 2

    Related Posts

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026

    ಉಡುಪಿ: ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!!

    July 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    July 31, 2026

    ಅಂಬ್ಯಲೆನ್ಸ್‌ನಲ್ಲೇ ಡ್ರಗ್ಸ್ ಪೂರೈಕೆ ದಂಧೆ; ಎಸ್ಕೇಪ್ ಆಗಿರುವ ಜಲೀಲ್ ಬಾಬಾ ವಿದೇಶಕ್ಕೆ ಪರಾರಿ ಶಂಕೆ!

    July 31, 2026

    ಬೆಳ್ತಂಗಡಿ: ದುಬೈಗೆ ತೆರಳುವ ಮುನ್ನವೇ ಎಂಡಿಎಂಎ ಜಾಲದಲ್ಲಿ ಸಿಕ್ಕಿಬಿದ್ದ ಯುವಕ

    July 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.