Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» 3 ವರ್ಷದ ಬಾಲಕನಿಗೆ ನಾಲಿಗೆ ಶಸ್ತ್ರಚಿಕಿತ್ಸೆ ಬದಲು ‘ಸುನ್ನತಿ’ ಮಾಡಿದ ಆಸ್ಪತ್ರೆಯ ಪರವಾನಗಿ ರದ್ದು
    ಇತ್ತೀಚಿನ ಸುದ್ದಿ

     3 ವರ್ಷದ ಬಾಲಕನಿಗೆ ನಾಲಿಗೆ ಶಸ್ತ್ರಚಿಕಿತ್ಸೆ ಬದಲು ‘ಸುನ್ನತಿ’ ಮಾಡಿದ ಆಸ್ಪತ್ರೆಯ ಪರವಾನಗಿ ರದ್ದು

    June 27, 2023
    Share

    ಬರೇಲಿ: ಬರೇಲಿಯ ಆಸ್ಪತ್ರೆಯೊಂದರಲ್ಲಿ 3 ವರ್ಷದ ಬಾಲಕನಿಗೆ ಸುನ್ನತಿ ಮಾಡಿದ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚನೆ ಮೇರೆಗೆ ಎಂ ಖಾನ್ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗಿದೆ.

    ಶನಿವಾರ ಈ ಬಗ್ಗೆ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, “ದೂರು ಸರಿಯಾಗಿದ್ದರೆ, ತಪ್ಪಿತಸ್ಥ ವೈದ್ಯರು ಮತ್ತು ಆಸ್ಪತ್ರೆಯ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಿಸಲು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಲು ಮತ್ತು ಸಂಪೂರ್ಣ ವರದಿಯನ್ನು ನೀಡಲು ಬರೇಲಿಯ ಸಿಎಂಒಗೆ ಆದೇಶ ನೀಡಲಾಗಿದೆ” ಎಂದು ಪಾಠಕ್ ಹೇಳಿದ್ದಾರೆ.

    ಜೂನ್ 23ರಂದು ಸ್ಟೇಡಿಯಂ ರಸ್ತೆಯ ಎಂ ಖಾನ್ ಆಸ್ಪತ್ರೆಯಲ್ಲಿ ಮೂರು ವರ್ಷದ ಬಾಲಕನಿಗೆ ನಾಲಿಗೆ ಶಸ್ತ್ರಚಿಕಿತ್ಸೆ ಮಾಡುವ ಬದಲು ಸುನ್ನತಿ ಮಾಡಲಾಗಿತ್ತು. ಘಟನೆ ಬಳಿಕ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಸಾರ್ವಜನಿಕವಾಗಿ ತಿಳಿಯುತ್ತಿದ್ದಂತೆಯೇ ಹಲವು ಹಿಂದೂ ಸಂಘಟನೆಗಳು ಸ್ಥಳಕ್ಕೆ ಆಗಮಿಸಿ ಸುನ್ನತಿ ವಿರೋಧಿಸಿ ಪ್ರತಿಭಟನೆ ನಡೆಸಿದರು.

    ಘಟನೆ ಬಗ್ಗೆ ಮಾಹಿತಿ ಪಡೆದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬರೇಲಿ ಮುಖ್ಯ ವೈದ್ಯಾಧಿಕಾರಿ ಡಾ.ಬಲ್ಬೀರ್ ಸಿಂಗ್ ಅವರಿಗೆ ಸೂಚಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

    Post Views: 257

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.