Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಅಡ್ಯಾರ್ ಬೋಂಡಾ ಕಾರ್ಖಾನೆಗೆ ಕ್ಲೀನ್ ಚಿಟ್
    ಇತ್ತೀಚಿನ ಸುದ್ದಿ

    ಮಂಗಳೂರು : ಅಡ್ಯಾರ್ ಬೋಂಡಾ ಕಾರ್ಖಾನೆಗೆ ಕ್ಲೀನ್ ಚಿಟ್

    May 2, 2024
    Share

    ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

    ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ. ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು. ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ. ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

    Post Views: 262

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.