ಮಂಗಳೂರು: ಹಾಲು, ಮೊಸರು ದರ ಏರಿಕೆ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ಹಿಡಿದಿದ್ದಾರೆ.
ಹಾಲು ಮತ್ತು ಮೊಸರಿನ ದರವನ್ನು 3ರೂಗೆ ಏರಿಕೆ ಮಾಡಿದ್ದ ಕೆಎಂಎಫ್ನ ಆದೇಶವನ್ನು ಬೊಮ್ಮಾಯಿ ತಡೆ ಹಿಡಿದಿದ್ದಾರೆ. ಬೆಲೆ ಏರಿಕೆ ಬಗ್ಗೆ ನ.20ರಂದು ನಡೆಯುವ ಸಭೆ ಬಳಿಕ ನಿರ್ಧಾರ ಮಾಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಹಾಲು, ಮೊಸರು ಎರಡೂ ಉತ್ಪನ್ನಗಳ ದರ ಹೆಚ್ಚಿಸಿ ಸೋಮವಾರ ಬೆಳಗ್ಗೆ ಆದೇಶಿಸಿದ್ದರು.
ಸೋಮವಾರ ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದೂ ಆದೇಶದಲ್ಲಿ ಉಲ್ಲೇಖವಿತ್ತು. ಹೀಗಾಗಿ ಮಂಗಳವಾರ ಮುಂಜಾನೆ ಹಾಲು, ಮೊಸರು, ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ ಇನ್ನಿತರ ಉತ್ಪನ್ನಗಳ ಖರೀದಿಗೆ ಹೆಚ್ಚಿನ ಹಣ ಹೊಂದಿಸಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿತ್ತು.